ಕ್ರಿಷ್ಣಘಾಟಿ-ಮೆಂದಾರ್ ಸೆಕ್ಟರ್'ನಲ್ಲಿ ಪಾಕಿಸ್ತಾನದ ಸೈನಿಕರು ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ, ಈ ವೇಳೆ ಓರ್ವ ಸೈನಿಕರಿಗೆ ಗಾಯವಾಗಿದೆ ಎಂದು ರಾಜ್'ಪುರಿ ಸೆಕ್ಟರ್'ನ ಐಜಿ ಜಾನಿ ವಿಲಿಯಮ್ಸ್ ಹೇಳಿದ್ದಾರೆ.
ಜಮ್ಮು(ಅ.08): ಪಾಕಿಸ್ತಾನದ ಸೈನಿಕರು ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿದ್ದಾರೆ. ಪೋಂಚು ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭಾರತೀಯ ಯೋಧರೊಬ್ಬರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಕ್ರಿಷ್ಣಘಾಟಿ-ಮೆಂದಾರ್ ಸೆಕ್ಟರ್'ನಲ್ಲಿ ಪಾಕಿಸ್ತಾನದ ಸೈನಿಕರು ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ, ಈ ವೇಳೆ ಓರ್ವ ಸೈನಿಕರಿಗೆ ಗಾಯವಾಗಿದೆ ಎಂದು ರಾಜ್'ಪುರಿ ಸೆಕ್ಟರ್'ನ ಐಜಿ ಜಾನಿ ವಿಲಿಯಮ್ಸ್ ಹೇಳಿದ್ದಾರೆ.
ಭಾರತದ ಸೇನೆ ಸರ್ಜಿಕಲ್ ದಾಳಿ ನಡೆಸಿದ ನಂತರ ಪಾಕ್ ಸೈನಿಕರು ಜಮ್ಮು- ಕಾಶ್ಮೀರದಲ್ಲಿ 25 ಬಾರಿ ಕದನ ವಿರಾಮ ಉಲ್ಲಂಘಿಸಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.