ಹಿಜ್ಬುಲ್ ಉಗ್ರ ಸಮೀರ್ ಟೈಗರ್ ಕೊಂದಿದ್ದ ಯೋಧನ ಅಪಹರಣಕಣಿವೆ ರಾಜ್ಯದ ಪುಲ್ವಾಮಾದಲ್ಲಿ ಘಟನೆಔರಂಗಜೇಬ್ ರನ್ನು ಅಪಹರಿಸಿದ ಶಸ್ತ್ರಸಜ್ಜಿತ ಉಗ್ರರ ಗುಂಪು

ಶ್ರೀನಗರ(ಜೂ.14): ಹಿಜ್ಬುಲ್ ಮುಜಾಯಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ನನ್ನು ಹತ್ಯೆಗೈದಿದ್ದ ಭಾರತೀಯ ಸೇನೆಯ ಯೋಧನನ್ನು ಉಗ್ರರು ಅಪಹರಿಸಿದ್ದಾರೆ. ಮೋಸ್ಟ್ ವಾಂಟೆಡ್ ಉಗ್ರ ಸಮೀರ್ ಟೈಗರ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದ ಔರಂಗಜೇಬ್ ಎಂಬ ಯೋಧನನ್ನು ಅಪಹರಣ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯೋಧ ಔರಂಗಜೇಜ್ 23 ರಾಷ್ಟ್ರೀಯ ರೈಫಲ್ಸ್ ಗೆ ಸೇರಿದವರಾಗಿದ್ದು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ, ಪುಲ್ವಾಮಾದಲ್ಲಿ ಶಸ್ತ್ರ ಸಜ್ಜಿತ ಉಗ್ರರ ತಂಡ ಗನ್ ಪಾಯಿಂಟ್ ನಲ್ಲಿ ಅಪಹರಣ ಮಾಡಿದೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸಮೀರ್ ಟೈಗರ್ ಹಾಗೂ ಮತ್ತೋರ್ವ ಉಗ್ರನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯಲಾಗಿತ್ತು. ಈ ವೇಳೆ ಯೋಧ ಔರಂಗಜೇಬ್ ಸಮೀರ್ ನನ್ನು ಗುಂಡು ಹಾರಿಸಿ ಕೊಂದು ಹಾಕಿದ್ದರು. ಉಗ್ರರು ಅಪಹರಿಸಿದ್ದಾರೆ