ಉಗ್ರರಿಗಿಂತ ಯೋಧರಿಂದಲೇ ಹೆಚ್ಚು ಕಾಶ್ಮೀರಿ ಜನಗಳ ಹತ್ಯೆ: ವಿವಾದ

Army operations kill more civilians than terrorists: Ghulam Nabi Azad
Highlights

ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಪ್ರಮಾಣದಲ್ಲಿ ಯೋಧರೇ ಜನಸಾಮಾನ್ಯರನ್ನು ಹತ್ಯೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಆರೋಪಿಸಿದ್ದಾರೆ. ಅವರ ಈ ಆರೋಪವನ್ನು ಕಾಂಗ್ರೆಸ್‌ ಸಮರ್ಥಿಸಿಕೊಂಡಿದ್ದರೆ, ಬಿಜೆಪಿ ಈ ಹೇಳಿಕೆ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ನವದೆಹಲಿ: ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಪ್ರಮಾಣದಲ್ಲಿ ಯೋಧರೇ ಜನಸಾಮಾನ್ಯರನ್ನು ಹತ್ಯೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಆರೋಪಿಸಿದ್ದಾರೆ. ಅವರ ಈ ಆರೋಪವನ್ನು ಕಾಂಗ್ರೆಸ್‌ ಸಮರ್ಥಿಸಿಕೊಂಡಿದ್ದರೆ, ಬಿಜೆಪಿ ಈ ಹೇಳಿಕೆ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಆಜಾದ್‌, ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಉಂಟಾಗುವ ಸಾವಿಗಿಂತ ಹೆಚ್ಚಾಗಿ ಸೇನಾ ಕಾರ್ಯಾಚರಣೆಯಿಂದಲೇ ಜನರು ಸಾವನ್ನಪ್ಪುತ್ತಿದ್ದಾರೆ. ಯೋಧರ ದಾಳಿ ಉಗ್ರರಿಗಿಂತ ಹೆಚ್ಚಾಗಿ ಜನಸಾಮಾನ್ಯರನ್ನೇ ಗುರಿಯಾಗಿಸಿದೆ. ಉದಾಹರಣೆಗೆ ಪುಲ್ವಾಮಾದಲ್ಲಿ ಯೋಧರ ದಾಳಿಗೆ ಬಲಿಯಾಗಿದ್ದು ಓರ್ವ ಉಗ್ರ, ಆದರೆ ಅದೇ ವೇಳೆ 13 ಅಮಾಯಕ ನಾಗರಿಕರು ಸಾವನ್ನಪ್ಪಿದ್ದರು ಎಂದು ಹೇಳಿದ್ದಾರೆ.

ಅವರ ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಭಾರತವನ್ನು ಛಿದ್ರ ಮಾಡುವ ಶಕ್ತಿಗಳಿಗೆ ಬೆಂಬಲ ನೀಡುವ ಹೊಸ ಶಕ್ತಿಯಾಗಿ ರಾಹುಲ್‌ ಗಾಂಧಿ ಅಧ್ಯಕ್ಷತೆಯ ಕಾಂಗ್ರೆಸ್‌ ಉದಯಿಸಿದೆ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ವ್ಯಂಗ್ಯವಾಡಿದ್ದಾರೆ.

ಈ ನಡುವೆ ಆಜಾದ್‌ ಹೇಳಿಕೆಯನ್ನು ಕಾಂಗ್ರೆಸ್‌ ಸಮರ್ಥಿಸಿದೆ. ರಾಜ್ಯದಲ್ಲಿ ನಾಗರಿಕರ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ಆಜಾದ್‌ ಕಳವಳ ವ್ಯಕ್ತಪಡಿಸಿದ್ದರಲ್ಲಿ ತಪ್ಪೇನು ಎಂದು ಪಕ್ಷದ ವಕ್ತಾರ ರಣದೀಪ್‌ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

loader