ಲೇಡೀಸ್ ಟಾಯ್ಲೆಟ್ನಲ್ಲಿ ಮೊಬೈಲ್ ಕ್ಯಾಮರಾ ಅಳವಡಿಸಿದ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರು (ಸೆ.15): ಮಂಗಳೂರು ವಿಶ್ವವಿದ್ಯಾನಿಲಯದ ಲೇಡೀಸ್ ಟಾಯ್ಲೆಟ್ನಲ್ಲಿ ಮೊಬೈಲ್ ಕ್ಯಾಮರಾ ಅಳವಡಿಸಿದ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ವಿವಿಯ ಮೆರೈನ್ ಜಿಯಾಲಜಿ ವಿಭಾಗದ ಎರಡನೇ ವರ್ಷದ ವಿದ್ಯಾರ್ಥಿ 22 ವರ್ಷದ ಸಂತೋಷ್ ಬಂಧಿತ ಆರೋಪಿ.
ಲೇಡೀಸ್ ಟಾಯ್ಲೆಟ್ನಲ್ಲಿ ಮೊಬೈಲ್ ಕ್ಯಾಮರಾ ಅಳವಡಿಸಿದ ಈ ಪ್ರಕರಣವನ್ನು ವೈಜ್ಞಾನಿಕ ಹಾಗೂ ಸಾಕ್ಷ್ಯಾಧಾರಗಳ ಆಧಾರದಲ್ಲಿ ಪೊಲೀಸರು ಭೇದಿಸಿದ್ದು, 82 ಮಂದಿ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ್ದರು. ಮೊಬೈಲ್ ವೀಡಿಯೋದಲ್ಲಿ ದೊರಕಿದ ದೃಶ್ಯಾವಳಿಯನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
