ನವದೆಹಲಿ[ಆ.05]: ಜಮ್ಮು ಕಾಶ್ಮೀರ ಇನ್ಮುಂದೆ ರಾಜ್ಯವಲ್ಲ, ಕೇಂದ್ರಾಡಳಿತ ಪ್ರದೇಶ. ಸಂವಿಧಾನದಲ್ಲಿ ಕಣಿವೆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನ-ಮಾನವನ್ನು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಕೇಂದ್ರದ ಪ್ರಸ್ತಾವನೆಗೆ ರಾಜಕೀಯ ನಾಯಕರು, ಸಿನಿ ತಾರೆಯರು ಸೇರಿದಂತೆ ಹಲವಾರು ಗಣ್ಯರು ಪರ ವಿರೋಧ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ನಲ್ಲಿ ಯಾರು ಏನಂದಿದ್ದಾರೆ? ಇಲ್ಲಿದೆ ಒಂದು ಝಲಕ್

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸರಣಿ ಟ್ವೀಟ್‌ಗಳ ಮೂಲಕ ಈ ಪ್ರಸ್ತಾವನೆಯನ್ನು ಸ್ವಾಗತಿಸಿದ್ದಾರೆ. ದೇಶದ ಭವಿಷ್ಯ ರುಪಿಸುವಲ್ಲಿ ಇದೊಂದು ಮಹತ್ವದ ಹೆಜ್ಜೆ ಎಂದು ಬಣ್ಣಿಸಿದ್ದಾರೆ.

 

ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ಮೋದಿ ಸರ್ಕಾರದ ಈ ನಡೆಯನ್ನು ಬೆಂಬಲಿಸಿದ್ದಾರೆ. ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಬೆಂಬಲಿಸುತ್ತೇವೆ. ಈ ನಿರ್ಧಾರದಿಂದ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸುತ್ತೆ ಎಂಬ ಭರವಸೆ ನಮಗಿದೆ ಎಂದಿದ್ದಾರೆ.

ಅತ್ತ ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ ಕೂಡಾ ಟ್ವೀಟ್ ಮೂಲಕ ಸರ್ಕಾರದ ನಡೆಯನ್ನು ಶ್ಲಾಘಿಸಿದ್ದಾರೆ.

 

ಇನ್ನು ಸರ್ಕಾರದ ಈ ಪ್ರಸ್ತಾವನೆಗೆ ವಿರೋಧವೂ ವ್ಯಕ್ತವಾಗಿದೆ. ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮಹಬೂಬ ಮುಫ್ತಿ ಸೇರಿದಂತೆ ಹಲವರು ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.