ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜ್ಯಸಭಾ ಚುನಾವಣೆಗೆ ಉತ್ತರ ಪ್ರದೇಶದಿಂದ ಸ್ಪರ್ಧಿಸಲಿದ್ದಾರೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜ್ಯಸಭಾ ಚುನಾವಣೆಗೆ ಉತ್ತರ ಪ್ರದೇಶದಿಂದ ಸ್ಪರ್ಧಿಸಲಿದ್ದಾರೆ.

ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಮಧ್ಯ ಪ್ರದೇಶದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಬುಧವಾರ ಪ್ರಕಟಿಸಿದೆ. ಪ್ರಸ್ತುತ ಜೇಟ್ಲಿ ಗುಜರಾತ್‌ನಿಂದ ಮತ್ತು ಪ್ರಧಾನ್‌ ಬಿಹಾರದಿಂದ ರಾಜ್ಯಸಭಾ ಸದಸ್ಯರುಗಳಾಗಿದ್ದಾರೆ.

ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಏಳು ಕೇಂದ್ರ ಸಚಿವರು ಮತ್ತು ಓರ್ವ ಪ್ರಧಾನ ಕಾರ್ಯದರ್ಶಿ ಸ್ಪರ್ಧಿಸುವ ಬಗ್ಗೆ ಪ್ರಕಟಿಸಲಾಗಿದೆ.

ಕೇಂದ್ರ ಸಚಿವರುಗಳಾದ ತಾವರ್‌ಚಂದ್‌ ಗೆಹ್ಲೋಟ್‌, ರವಿಶಂಕರ್‌ ಪ್ರಸಾದ್‌, ಜೆ.ಪಿ. ನಡ್ಡಾ, ಪುರುಷೋತ್ತಮ ರುಪಾಲ, ಮುನ್‌ಸುಖ್‌ ಮಾಂಡವೀಯ ತಮ್ಮ ತವರು ರಾಜ್ಯಗಳಿಂದಲೇ ಸ್ಪರ್ಧಿಸಲಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್‌ ಬಿಹಾರದಿಂದ ಸ್ಪರ್ಧಿಸಲಿದ್ದಾರೆ.