ವಿತ್ತ ಸಚಿವ ಅರುಣ್ ಜೇಟ್ಲಿ ಮಾನನಷ್ಟ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಐವರ ಮೇಲೆ ಪಟಿಯಾಲಾ ಹೌಸ್ ಕೋರ್ಟ್ ನೋಟಿಸ್ ನೀಡಿದೆ.

ನವದೆಹಲಿ (ಮಾ.25): ವಿತ್ತ ಸಚಿವ ಅರುಣ್ ಜೇಟ್ಲಿ ಮಾನನಷ್ಟ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಐವರ ಮೇಲೆ ಪಟಿಯಾಲಾ ಹೌಸ್ ಕೋರ್ಟ್ ನೋಟಿಸ್ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆ ಮೇ.20 ರಂದು ನಡೆಯಲಿದೆ. ಬಿಜೆಪಿ ಅಮಾನತು ಸಂಸದ ಕೀರ್ತಿ ಅಜಾದ್ ಗೆ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ.

ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ವಿತ್ತ ಸಚಿವ ಅರುಣ್ ಜೇಟ್ಲಿಯವರಿಗೆ 52 ಪಾಟೀ ಸವಾಲು ಕೇಳಿದರು. ಅರವಿಂದ್ ಕೇಜ್ರಿವಾಲ್ ಮೇಲೆ ಅರುಣ್ ಜೇಟ್ಲಿಯವರು ದಾಖಲಿಸಿದ ದೂರು ನಿರಾಧಾರವಾದದ್ದು. ಹಾಗಾಗಿ ವಜಾಗೊಳಿಸಬೇಕು ಎಂದು ವಾದಿಸಿದ್ದರು.