ಕೇಂದ್ರೀಯ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಡುವಿನ ವಾಕ್ಸಮರ ತಾರಕ್ಕೇರಿದೆ. ಈಗಾಗಲೇ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕೇಜ್ರಿವಾಲ್ ಮೇಲೆ ಜೇಟ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.

ನವದೆಹಲಿ (ಮೇ.22): ಕೇಂದ್ರೀಯ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಡುವಿನ ವಾಕ್ಸಮರ ತಾರಕ್ಕೇರಿದೆ. ಈಗಾಗಲೇ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕೇಜ್ರಿವಾಲ್ ಮೇಲೆ ಜೇಟ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ಇವರಿಬ್ಬರ ನಡುವೆ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ದೆಹಲಿ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಕೇಜ್ರಿವಾಲ್ ಪರ ವಕೀಲ ರಾಮ್ ಜೇಠ್ಮಲಾನಿ ಜೇಟ್ಲಿಯವರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.