ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಇದೀಗ ಹೊಸ ಸುಳಿವೊಂದನ್ನು ನೀಡಿದ್ದಾರೆ.  ಮತ್ತೆ ಖಾಸಗಿ ಸಂಸ್ಥೆಗಳಿಗೆ ಇಂಥ ಆಧಾರ್‌ ದತ್ತಾಂಶ ದೊರಕಿಸಿಕೊಡುವ ಕುರಿತು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಸುಳಿವು ನೀಡಿದ್ದಾರೆ.

ನವದೆಹಲಿ: ಖಾಸಗಿಯವರು ಆಧಾರ್‌ ದತ್ತಾಂಶ ಬಳಕೆಗೆ ಸುಪ್ರೀಂಕೋರ್ಟ್‌ ನಿಷೇಧ ಹೇರಿದ ಬೆನ್ನಲ್ಲೇ, ಮತ್ತೆ ಖಾಸಗಿ ಸಂಸ್ಥೆಗಳಿಗೆ ಇಂಥ ಆಧಾರ್‌ ದತ್ತಾಂಶ ದೊರಕಿಸಿಕೊಡುವ ಕುರಿತು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಸುಳಿವು ನೀಡಿದ್ದಾರೆ.

ಆಧಾರ್‌ ಕುರಿತು ಸುಪ್ರೀಂಕೋರ್ಟ್‌ ತೀರ್ಪಿನ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಜೇಟ್ಲಿ, ಕೋರ್ಟ್‌ನ ವರದಿಯನ್ನು ನಾವು ಪರಿಶೀಲಿಸುತ್ತಿದ್ದೇವೆ. ಶಾಸನಬದ್ಧ ಬೆಂಬಲ ಇಲ್ಲ ಎನ್ನುವ ಕಾರಣಕ್ಕೆ ಕೆಲವೊಂದು ಯೋಜನೆಗಳಿಗೆ ಆಧಾರ್‌ ಲಿಂಕ್‌ ಮಾಡುವುದು ಕಡ್ಡಾಯ ಅಲ್ಲ ಎಂದು ನ್ಯಾಯಾಲಯ ಹೇಳಿದೆ ಎಂದು ಅನ್ನಿಸುತ್ತಿದೆ. ಆದರೆ ಕೋರ್ಟ್‌ ಹೇರಿರುವ ನಿಷೇಧ ಸಾರ್ವಕಾಲಿಕ ಎಂದೇನಿಲ್ಲ. ಹೀಗಾಗಿ ಇಂಥ ವಿಷಯದಲ್ಲಿ ಏನು ಮಾಡಬಹುದು ಎಂಬುದನ್ನು ನಾವು ಪರಿಶೀಲಿಸಲಿದ್ದೇವೆ ಎಂದು ಹೇಳಿದ್ದಾರೆ.

ಈ ಮೂಲಕ ಅಗತ್ಯ ಬಿದ್ದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾನೂನು ರೂಪಿಸುವ ಮೂಲಕ ಖಾಸಗಿ ಸಂಸ್ಥೆಗಳಿಗೂ ಆಧಾರ್‌ ದತ್ತಾಂಶ ಬಳಕೆಗೆ ಅವಕಾಶ ಮಾಡಿಕೊಡುವ ಸುಳಿವು ನೀಡಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.