ನವದೆಹಲಿ(ಫೆ.09): ಅನಾರೋಗ್ಯ ಕಾರಣದಿಂದ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಕೇಂದ್ರ ಹಣಕಾಸು ಸಚಿವ ಅರುಣ್​ ಜೇಟ್ಲಿ, ಇಂದು ಭಾರತಕ್ಕೆ ಮರಳಿದ್ದಾರೆ.

ಈ ಕುರಿತು ಖುದ್ದು ಟ್ವೀಟ್ ಮಾಡಿರುವ ಅರುಣ್ ಜೇಟ್ಲಿ, ಮನೆಗೆ ಮರಳಿರುವುದಕ್ಕೆ ಸಂತೋಷವಾಗಿದೆ ಎಂದು ತಾಯ್ನಾಡಿಗೆ ಮರಳಿದ ಸಂತಸ ಹಂಚಿಕೊಂಡಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 66 ವರ್ಷದ ಅರುಣ್ ಜೇಟ್ಲಿ, ಕಳೆದ ವರ್ಷ ಏಪ್ರಿಲ್ ನಲ್ಲಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಳೆದ ಜನವರಿ 15ರಂದು ಅಮೆರಿಕಕ್ಕೆ ತೆರಳಿದ್ದರು.

ಅರುಣ್ ಜೇಟ್ಲಿ ಅನುಪಸ್ಥಿತಿಯಲ್ಲಿ ಕಳೆದ ವಾರ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯೆಲ್​ ಬಜೆಟ್ ಮಂಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.