ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ನಿನ್ನೆಯಿಂದ ಧರಣಿ ಕುಳಿತಿದ್ದ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ಮಳೆಯನ್ನೂ ಲೆಕ್ಕಿಸದೆ ಹೋರಾಟ ನಡೆಸಿದ್ದರು.
ವಿವಿಧ ಬೇಡಿಕೆ ಈಡೇರಿಕೆ ಪಟ್ಟು ಹಿಡಿದು ಹೋರಾಟ ನಡೆಸ್ತಿದ್ದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಅಂತ್ಯವಾಗಿದೆ. ಸರ್ಕಾರ ಆಶಾ ಕಾರ್ಯಕರ್ತೆಯರ ಜೊತೆಗೆ ನಡೆಸಿದ ಮಾತುಕತೆ ಸಫಲವಾಗಿದ್ದು ಪ್ರತಿಭಟನೆ ವಾಪಸ್ ಪಡೆಯಲಾಗಿದೆ. ಕಾರ್ಯಕರ್ತೆಯರ ಬೇಡಿಕೆಯಂತೆ ಮುಂದಿನ ದಿನಗಳಲ್ಲಿ 6000 ರೂ. ವೇತನ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ನಿನ್ನೆಯಿಂದ ಧರಣಿ ಕುಳಿತಿದ್ದ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ಮಳೆಯನ್ನೂ ಲೆಕ್ಕಿಸದೆ ಹೋರಾಟ ನಡೆಸಿದ್ದರು. ಊಟ, ತಿಂಡಿ ಬಿಟ್ಟು ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿದ್ದರು. ಕೊನೆಗೂ ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಮಣಿದ ಸರ್ಕಾರ ಬೇಡಿಕೆ ಈಡೇರಿಕೆಯ ಭರವಸೆ ನೀಡಿದೆ.
