ಅಮರಾವತಿ: ನೂತನ ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಅಧಿಕಾರದ ಚುಕ್ಕಾಣಿ ಹಿಡಿದ ವಾರದಲ್ಲೇ ಆಶಾ ಕಾರ್ಯಕರ್ತೆಯರಿಗೆ ಬಂಪರ್‌ ಕೊಡುಗೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗಳಲ್ಲಿ ಒಂದಾಗಿದ್ದ ಮಾಸಿಕ ವೇತನವನ್ನು 3000 ರು.ನಿಂದ 10,000 ರು.ಗೆ ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ.

ಸೋಮವಾರ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯ ಬಳಿಕ ಈ ನಿರ್ಧಾರಕ್ಕೆ ಬಂದಿದ್ದಾರೆ. ಅಲ್ಲದೆ, 108, 104 ಆ್ಯಂಬ್ಯುಲೆನ್ಸ್‌ ಸೇವೆಯನ್ನುಮುಂದುವರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಆರೋಗ್ಯ ಯೋಜನೆ ‘ಆರೋಗ್ಯಶ್ರೀ’ ಬದಲಾಗಿ ‘ವೈಎಸ್‌ಆರ್‌ ಆರೋಗ್ಯಶ್ರೀ’ ಎಂದು ಮರುನಾಮಕರಣ ಮಾಡಿರುವ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವಾ ಗುಣಮಟ್ಟದ ವರದಿ ನೀಡುವಂತೆಯೂ ಆದೇಶಿಸಿದ್ದಾರೆ.