ಚುನಾವಣೆಗಾಗಿ ಈ ಪಕ್ಷಗಳ ಕದ ತಟ್ಟುತ್ತಿದ್ದಾರೆ ಅಶೋಕ್ ಖೇಣಿ

First Published 2, Mar 2018, 10:47 AM IST
Ashok Kheny Contest Election
Highlights

ನೈಸ್ ಕಂಪನಿ ಮುಖ್ಯಸ್ಥ ಅಶೋಕ್ ಖೇಣಿ ಕಳೆದ ಬಾರಿ ಕರ್ನಾಟಕ ಮಕ್ಕಳ ಪಕ್ಷ ಸ್ಥಾಪಿಸಿ, ತಾವೇ ಅಭ್ಯರ್ಥಿಯಾಗಿ ಗೆದ್ದಿದ್ದರು. ಅವರು ಈಗ ಕಾಂಗ್ರೆಸ್ ಹಾಗೂ ಬಿಜೆಪಿ ಕದ ತಟ್ಟುತ್ತಿದ್ದಾರೆಂಬ ಗಾಳಿ ಸುದ್ದಿ ಹಬ್ಬಿದೆ.

ಬೀದರ್ : ನೈಸ್ ಕಂಪನಿ ಮುಖ್ಯಸ್ಥ ಅಶೋಕ್ ಖೇಣಿ ಕಳೆದ ಬಾರಿ ಕರ್ನಾಟಕ ಮಕ್ಕಳ ಪಕ್ಷ ಸ್ಥಾಪಿಸಿ, ತಾವೇ ಅಭ್ಯರ್ಥಿಯಾಗಿ ಗೆದ್ದಿದ್ದರು. ಅವರು ಈಗ ಕಾಂಗ್ರೆಸ್ ಹಾಗೂ ಬಿಜೆಪಿ ಕದ ತಟ್ಟುತ್ತಿದ್ದಾರೆಂಬ ಗಾಳಿ ಸುದ್ದಿ ಹಬ್ಬಿದೆ. 2013ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎರಡನೇ ಸ್ಥಾನ ಪಡೆದಿದ್ದ ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಮತ್ತೊಮ್ಮೆ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಅವರಿಗೆ ಟಿಕೆಟ್ ಘೋಷಣೆಯಾಗಿದೆ.

ಕಳೆದ ಬಾರಿ ಬಿಎಸ್ಪಿ ಈ ಕ್ಷೇತ್ರದಲ್ಲಿ 16 ಸಾವಿರಕ್ಕೂ ಅಧಿಕ ಮತಗಳೊಂದಿಗೆ ಮೂರನೇ ಸ್ಥಾನ ಪಡೆದಿತ್ತು. ಆ ಪಕ್ಷದ ಜತೆಗಿನ ಮೈತ್ರಿಯಿಂದಾಗಿ ತಮಗೆ ಲಾಭವಾಗಬಹುದು ಎಂಬ ನಿರೀಕ್ಷೆಯಲ್ಲಿ ಖಾಶೆಂಪೂರ್ ಇದ್ದಾರೆ. ಹೋದ ಬಾರಿ ಕೆಜೆಪಿ ಅಭ್ಯರ್ಥಿಯಾಗಿದ್ದ ಡಾ| ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.

ಖೇಣಿ ಬಿಜೆಪಿ ಸೇರ್ಪಡೆಯಾದರೆ ಹಾಲಿ ಜಿಲ್ಲಾಧ್ಯಕ್ಷ ಪಟ್ಟಕ್ಕೇ ಅವರು ತೃಪ್ತಿಪಟ್ಟುಕೊಳ್ಳಬೇಕು. ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅಳಿಯ ಚಂದ್ರಸಿಂಗ್ ಕಾಂಗ್ರೆಸ್ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ಸಂಗ್ರಾಮ್ ಕೂಡ ಪ್ರಯತ್ನಿಸುತ್ತಿದ್ದಾರೆ.

loader