ಮೀರತ್(ಸೆ.28): ಮುಜಾಫರ್ ನಗರ್ ದಂಗೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಉತ್ತರ ಪ್ರದೇಶ ಮೀರತ್ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರ ಮೀರತ್ ನಿಉವಾಸದ ಮೇಲೆ ಅಪರಿಚಿತರಿಂದ ಗ್ರೆನೇಡ್ ದಾಳಿ ನಡೆದಿದೆ.

ನಿನ್ನೆ ಬೆಳಿಗ್ಗೆ ಈ ಘಟನೆ ನಡೆದಿದ್ದು, ಮೀರತ್ ನ ಲಾಲ್  ಕುರ್ತಿ ಪ್ರದೇಶದಲ್ಲಿನ ಶಾಸಕರ ನಿವಾಸದ ಮೇಲೆ ಗ್ರೆನೇಡ್ ದಾಳಿ ನಡೆದಿದೆ. ಅದೃಷ್ಟ ವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೋಲೀಸರು ಸ್ಪಷ್ಟಪಡಿಸಿದ್ದಾರೆ.

ಶಾಸಕ ಸಂಗೀತ್ ಸೋಮ್ ಮನೆಗೆ ಆಗಮಿಸಿದ ಕೆಲವೇ ನಿಮಿಷಗಳಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಗ್ರೆನೇಡ್ ದಾಳಿಯಲ್ಲದೇ ಆಗುಂತಕರು ಗುಂಡಿನ ದಾಳಿ ಕೂಡ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

 ದಾಳಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಪ್ರಗತಿಯಲ್ಲಿದೆ ಎಂದು ಎಸ್​ಎಸ್​ಪಿ ಅಖಿಲೇಶ್​ ಕುಮಾರ್​ ಹೇಳಿದ್ದು, ಇದು ಭಯೋತ್ಪಾದಕ ಕೃತ್ಯವಲ್ಲ ಎನ್ನುವುದು ಪ್ರಾಥಮಿಕ ತನಿಖೆಯಿಂದ ಸಾಬೀತಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.