5ನೇ ಕ್ಲಾಸ್‌ ಬಾಲಕಿ ಮೇಲೆ ಅತ್ಯಾಚಾರ, ಬೆಂಕಿ ಹಚ್ಚಿ ಕೊಲೆ

First Published 24, Mar 2018, 10:06 PM IST
Assam Class V girl set on fire after gang rape dies
Highlights

ಬಾಲಕಿಯು ಮನೆಯಲ್ಲಿ ಒಬ್ಬಳೇ ಇದ್ದಾಗ ಮೂವರು ಆರೋಪಿಗಳು ಅತ್ಯಾಚಾರ ನಡೆಸಿ, ಅನಂತರ ಸೀಮೆ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿದ್ದಾರೆ.

ಗುವಾಹಟಿ(ಮಾ.24): 5ನೇ ತರಗತಿ ಬಾಲಕಿ ಮೇಲೆ ಆಕೆಯದ್ದೇ ತರಗತಿಯ ಇಬ್ಬರು ಬಾಲಕರು ಸೇರಿದಂತೆ ಮೂವರು ಅತ್ಯಾಚಾರ ಎಸಗಿ ಬಳಿಕೆ ಆಕೆಯನ್ನು ಬೆಂಕಿ ಹಚ್ಚಿ ಕೊಲೈಗೈದಿರುವ ಹೃದಯವಿದ್ರಾವಕ ಘಟನೆ ಅಸ್ಸಾಂನ ನಾಗಾನ್‌ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿಯು ಮನೆಯಲ್ಲಿ ಒಬ್ಬಳೇ ಇದ್ದಾಗ ಮೂವರು ಆರೋಪಿಗಳು ಅತ್ಯಾಚಾರ ನಡೆಸಿ, ಅನಂತರ ಸೀಮೆ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿದ್ದಾರೆ. ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಬಾಲಕಿಯ ಇಬ್ಬರು ಸಹಪಾಟಿಗಳನ್ನು ಬಂಧಿಸಿದ್ದು, ಪರಾರಿಯಾಗಿರುವ ಝಾಕಿರ್‌ ಹುಸೇನ್‌ ಎಂಬಾತನಿಗಾಗಿ ಹುಡುಕಾಟ ನಡೆಸಿದ್ದಾರೆ.

loader