ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಪ್ರಾಣ ಬಿಟ್ಟರೆ, ನಾಲ್ವರು ಯೋಧರು ಗಾಯಗೊಂಡಿದ್ದಾರೆ

ಅಸ್ಸಾಂ(ನ.19): ಅಸ್ಸಾಂನ ತಿನ್ಸುಕಿಯಾ ನಲ್ಲಿ ಶಂಕಿತ ಉಲ್ಫಾ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಮೂವರು ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ತಿನ್ಸುಕಿಯಾದ ಪೆಂಗ್ರಿ ಅರಣ್ಯದಲ್ಲಿ ಭಾರತೀಯ ಸೇನೆ ಬೆಳಗ್ಗೆ 5.30ರ ಸುಮಾರಿಗೆ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿತ್ತು. ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಪ್ರಾಣ ಬಿಟ್ಟರೆ, ನಾಲ್ವರು ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಯೋಧರ ವಿರುದ್ಧ ಶಂಕಿತ ಉಲ್ಫಾ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಡಿಜಿಪಿ ಮುಕೇಶ್ ಸಹಾಯ್ ಘಟನೆ ಕುರಿತು ಮಾಹಿತಿ ನೀಡಿದ್ದಾರೆ.