Asianet Suvarna News Asianet Suvarna News

ಅಸ್ಸಾಮ್’ನಲ್ಲಿ ಭೀಕರ ಪ್ರವಾಹ; 800ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆ

ಭೀಕರ ಪ್ರವಾಹಕ್ಕೆ ಅಸ್ಸಾಮ್ ರಾಜ್ಯ ಅಕ್ಷರಶಃ ತತ್ತರಿಸಿ ಹೋಗಿದೆ. 13 ಕ್ಕೂ ಹೆಚ್ಚು ಜಿಲ್ಲೆಗಳು ಪ್ರವಾಹದ ಹೊಡೆತಕ್ಕೆ ಸಿಲುಕಿದ್ದು ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ.  ಸುಮಾರು 4 ಲಕ್ಷಕ್ಕೂ ಹೆಚ್ಚು ಮಂದಿ ಮನೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. 800ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆಯಾಗಿವೆ.

Assam Flood

ಗುವಾಹಟಿ (ಜು.05): ಭೀಕರ ಪ್ರವಾಹಕ್ಕೆ ಅಸ್ಸಾಮ್ ರಾಜ್ಯ ಅಕ್ಷರಶಃ ತತ್ತರಿಸಿ ಹೋಗಿದೆ. 13 ಕ್ಕೂ ಹೆಚ್ಚು ಜಿಲ್ಲೆಗಳು ಪ್ರವಾಹದ ಹೊಡೆತಕ್ಕೆ ಸಿಲುಕಿದ್ದು ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. 

ಸುಮಾರು 4 ಲಕ್ಷಕ್ಕೂ ಹೆಚ್ಚು ಮಂದಿ ಮನೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. 800ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆಯಾಗಿವೆ.

ಗಂಜಿ ಕೇಂದ್ರ ತೆರೆಯಲಾಗಿದ್ದು, 30ಸಾವಿರಕ್ಕೂ ಹೆಚ್ಚು ನಿರಾಶ್ರಿತರನ್ನು ಸುರಕ್ಷಿತ ಕ್ಯಾಂಪ್​ಗಳಿಗೆ ಸ್ಥಳಾಂತರಿಸಲಾಗಿದೆ.

ನಿರಾಶ್ರಿತರ ಸಂಖ್ಯೆ ದಿನೇ ದಿನೇ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Latest Videos
Follow Us:
Download App:
  • android
  • ios