ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ತಲವಾರು ಝಳಪಿಸಿವೆ. ಇಂದು (ಸೋಮವಾರ) ಬೆಳ್ಳಂಬೆಳಗ್ಗೆ ಮೂಡಬಿದ್ರೆಯಲ್ಲಿ ನೆತ್ತರು ಹರಿದಿದೆ. 

ಮಂಗಳೂರು, [ಸೆ.24]: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ತಲವಾರು ಝಳಪಿಸಿವೆ. ಇಂದು (ಸೋಮವಾರ) ಬೆಳ್ಳಂಬೆಳಗ್ಗೆ ಮೂಡಬಿದ್ರೆಯಲ್ಲಿ ನೆತ್ತರು ಹರಿದಿದೆ. 

ಮೂಡಬಿದ್ರೆಯ ಹಿಂದೂ ಸಂಘಟನೆಯ ಮುಖಂಡ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣದ ಆರೋಪಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರಿನಿಂದ ದಾಳಿ ನಡೆಸಿದೆ. 

ಮೂಡಬಿದರೆ ಹೊರವಲಯದ ಗಂಟಾಲ್ ಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದ್ದು, ಇನ್ನೋವಾ ಕಾರೊಂದರಲ್ಲಿ ಬಂದ ದುಷ್ಕರ್ಮಿಗಳ ತಂಡ ಇಮ್ತಿಯಾಜ್ (30) ಎಂಬಾತನನ್ನು ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದೆ. ಅದೃಷ್ಟವಶಾತ್ ಇಮ್ತಿಯಾಜ್ ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

2015ರಲ್ಲಿ ಹಿಂದೂ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಇಮ್ತಿಯಾಜ್ ಪ್ರಮುಖ ಆರೋಪಿಯಾಗಿದ್ದಾನೆ. ಅದೇ ವೈಷಮ್ಯದಿಂದ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ.