Asianet Suvarna News Asianet Suvarna News

ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿ ರಿಲೀಸ್

ಬಿಜೆಪಿ ಮುಂಬರುವ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ಇನ್ನೇನು ಕೆಲವೇ ದಿನಗಳಲ್ಲಿ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು ಇದೇ ವೇಳೆ ಮೂರು ರಾಜ್ಯಗಳಲ್ಲಿ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ.

Assembly Election BJP announces first list of candidates In 3 States
Author
Bengaluru, First Published Oct 21, 2018, 1:02 PM IST
  • Facebook
  • Twitter
  • Whatsapp

ನವದೆಹಲಿ : ಈಗಾಗಲೇ ಐದು ರಾಜ್ಯಗಳಲ್ಲಿ ಚುನಾವಣೆ ಘೋಷಣೆ ಮಾಡಲಾಗಿದ್ದು, ಚತ್ತೀಸ್ ಗಢ, ಮಿಜೋರಾಂ, ತೆಲಂಗಾಣದಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

ಐದು ರಾಜ್ಯಗಳಲ್ಲಿ ಬಹುಮತಗಳನ್ನು ಪಡೆದು ಸರ್ಕಾರ ರಚನೆ ಮಾಡುವ ಗುರಿಯನ್ನು ಹೊಂದಿರುವ ಬಿಜೆಪಿ ಗೆಲುವಿಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದೆ. 

ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ ಚತ್ತೀಸ್ ಗಢದ 77 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. 

ಇನ್ನು ತೆಲಂಗಾಣದ 38 ಕ್ಷೇತ್ರಗಳಿಗೂ ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮಿಜೋರಾಂನ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು  ಘೋಷಣೆ ಮಾಡಿದ್ದಾರೆ. 

ಶನಿವಾರ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿದ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. 

ಚತ್ತೀಸ್ ಗಢದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು ನ.12, 20 ರಂದು ಚುನಾವಣೆ ನಡೆಯಲಿದೆ. ಚತ್ತೀಸ್ ಗಢದ ಚುನಾವಣೆ ಜನವರಿ 5ರಂದು ಮುಕ್ತಾಯವಾಗಲಿದೆ. ತೆಲಂಗಾಣದಲ್ಲಿ ಡಿಸೆಂಬರ್ 7ರಂದು ಚುನಾವಣೆ ನಡೆಯಲಿದೆ.  

Follow Us:
Download App:
  • android
  • ios