ನವದೆಹಲಿ(ಅ.3): ಹಣಕಾಸು ಅವ್ಯವಹಾರ ಆರೋಪ ಎದುರಿಸುತ್ತಿರುವ ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್ ಮತ್ತು ಅವರ ಪತ್ನಿಯ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಮಾಡಲು ಜಾರಿ ನಿರ್ದೇಶನಾಲಯಕ್ಕೆ ಒಪ್ಪಿಗೆ ಸಿಕ್ಕಿದೆ ಎಂಬ ಮಾಧ್ಯಮಗಳ ವರದಿಯನ್ನು ಹಿಮಾಚಲ ಸರ್ಕಾರ ತಳ್ಳಿಹಾಕಿದೆ. ಆಸ್ತಿಪಾಸ್ತಿಯನ್ನು ವಶಕ್ಕೆ ತೆಗೆದುಕೊಳ್ಳುವ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ತಂದಿರುವ ಕಾರಣ, ಇದು ಸಾಧ್ಯವಿಲ್ಲ ಎಂದು ಸರ್ಕಾರ ದೃಢಪಡಿಸಿದೆ. ಆಸ್ತಿ ಮುಟ್ಟುಗೋಲು ಕುರಿತಂತೆ ಸಿಎಂ ವೀರಭದ್ರ ಅವರು ಈಗಾಗಲೇ ದೆಹಲಿ ಹೈಕೋರ್ಟ್ ಮೊರೆಹೋಗಿದ್ದು, ಮುಟ್ಟುಗೋಲಿನ ತಡೆಯಾಜ್ಞೆ ನೀಡಿ ಮೇ ತಿಂಗಳಲ್ಲೇ ಹೈಕೋರ್ಟ್ ಆದೇಶ ಹೊರಡಿಸಿತ್ತು ಎಂದು ಹಿಮಾಚಲ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಆಸ್ತಿ ಮುಟ್ಟುಗೋಲು ಸಾಧ್ಯವಿಲ್ಲ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
