ಬೆಂಗಳೂರು[ಜು.24]: ರಾಜ್ಯದಲ್ಲಿ ನಡೆದ ರಾಜಕೀಯ ವಿಪ್ಲವಕ್ಕೆ ವಿಶ್ವಾಸಮತ ಯಾಚನೆ ಮೂಲಕ ತೆರೆ ಎಳೆಯಲಾಗಿದೆ. ರಾಜಕಾರಣದಲ್ಲಿ ಹೊಸ ಚಟುವಟಿಕೆಗಳು ಆರಂಭವಾಗಿದ್ದು, ಬಿಜೆಪಿ ನಾಯಕರು ಅಧಿಕಾರ ಗದ್ದುಗೆಗೆ ಏರಲು ಸಿದ್ಧರಾಗಿದ್ದಾರೆ. 

2018ರ ವಿಧಾನಸಭಾ ಚುನಾವಣೆ ಬಳಿಕ ಎರಡನೇ ಬಾರಿ ಮುಖ್ಯಮಂತ್ರಿ ಗಾದಿಗೆ ಏರಲು ಯಡಿಯೂರಪ್ಪ ಸಿದ್ಧರಾಗಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲು  ಮುಹೂರ್ತ ಫಿಕ್ಸ್ ಆಗಿವೆ. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜ್ಯೋತಿಷಿಗಳು ಯಡಿಯೂರಪ್ಪ ಪ್ರಮಾಣ ವಚನ ಸಮಾರಂಭವನ್ನು ನಡೆಸಲು 2 ಮುಹೂರ್ತ ನೀಡಿದ್ದಾರೆ. ಗುರುವಾರ ಮಧ್ಯಾಹ್ನ 3.28 ನಿಮಿಷದಿಂದ 3.48 ನಿಮಿಷದವರೆಗೆ ಒಂದು ಮುಹೂರ್ತ ನೀಡಲಾಗಿದೆ. 

ಇನ್ನೊಂದು ಮುಹೂರ್ತ ಶುಕ್ರವಾರ ನೀಡಲಾಗಿದ್ದು, ಸಂಜೆ ನಾಲ್ಕು ಗಂಟೆ ನೀಡಲಾಗಿದೆ. ಈ ಎರಡು ಸಮಯದಲ್ಲಿ ಯಡಿಯೂರಪ್ಪ ಯಾವ ಮುಹೂರ್ತದಲ್ಲಿ ಮುಖ್ಯಮಂತ್ರಿ ಗಾದಿಗೆ ಏರಲಿದ್ದಾರೆ ಎನ್ನುವುದು ಮಾತ್ರ ಇನ್ನೂ ಕನ್ಫರ್ಮ್ ಆಗಿಲ್ಲ. 

ಶನಿವಾರದ ಸುಳಿವು : ಆದರೆ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಮಾತ್ರ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶನಿವಾರ ನಡೆಯಬಹುದು ಎಂದು ಸುಳಿವು ನೀಡಿದ್ದಾರೆ. 

ಶಾಸಕಾಂಗ ಪಕ್ಷದ ಸಭೆ ನಡೆಸಬೇಕು. ಆ ನಂತರವಷ್ಟೆ ಪ್ರಮಾಣ ವಚನ ಸೇರಿದಂತೆ ಇನ್ನಿತರೆ ಎಲ್ಲ ವಿಚಾರಗಳೂ ನಿರ್ಧಾರ ಆಗಬೇಕು. ಇನ್ನು ಎರಡು ಮೂರು ದಿನಗಳಲ್ಲಿ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂದರು.