ರಮ್ಯಾ ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ ಎಂದು ರಮ್ಯಾ ಅವರ ತಾಯಿ ರಂಜಿತಾ ತಿಳಿಸಿದರು.

ನಂಜನಗೂಡು (ಏ.03): ರಮ್ಯಾ ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ ಎಂದು ರಮ್ಯಾ ಅವರ ತಾಯಿ ರಂಜಿತಾ ತಿಳಿಸಿದರು.

ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಮ್ಯಾ ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ. ರಮ್ಯಾ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವರದಿ ಸುಳ್ಳು. ರಮ್ಯಾಗೆ ಆರೋಗ್ಯ ಸರಿಯಿಲ್ಲದ ಕಾರಣದಿಂದ ಉಪ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಯಾವುದೇ ಚಿತ್ರೀಕರಣದಲ್ಲೂ ರಮ್ಯಾ ಪಾಲ್ಗೊಳ್ಳುತ್ತಿಲ್ಲ ಎಂದರು. 

ರಮ್ಯಾ ಪೂರ್ಣವಾಗಿ ಗುಣಮುಖವಾದ ನಂತರ ಸಂಪೂರ್ಣವಾಗಿ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯಲಿದ್ದಾಳೆ. ಚಿತ್ರರಂಗದಿಂದ ರಮ್ಯಾ ದೂರ ಉಳಿಯುವುದಾಗಿ ಅವರು ತಿಳಿಸಿದರು.