ಕೊಲಂಬೋ[ಏ. 27]  ಈಶಾನ್ಯ ಶ್ರೀಲಂಕಾದಲ್ಲಿದ್ದ ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರರ ಅಡಗುದಾಣಗಳ ಮೇಲೆ ಸೈನಿಕರು ದಾಳಿ ನಡೆಸಿದ್ದು, ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ 6 ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಸಾವಿಗೀಡಾಗಿರುವುದು ಇತ್ತೀಚಿನ ವರದಿ.

ದಾಳಿ ವೇಳೆ ಅಡಗುದಾಣದಲ್ಲಿ ಶೇಖರಿಸಿಡಲಾಗಿದ್ದ ಬಾಂಬ್ ಗಳನ್ನು ಉಗ್ರರೇ ಸ್ಫೋಟಿಸಿಕೊಂಡಿದ್ದಾರೆ. ಈ ವೇಳೆ ಮೂವರು ಶಂಕಿತ ಉಗ್ರರು ಸಾವನ್ನಪ್ಪಿದ್ದಾರೆ. 

ಲಂಕಾ ಸ್ಫೋಟ ಮಾಸ್ಟರ್‌ ಮೈಂಡ್‌ ಸಾವು!

ಶ್ರೀಲಂಕಾದಲ್ಲಿ ಇಸ್ಲಾಮಿಕ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಉಗ್ರರು  ಇಲ್ಲಿ ಅಡಗಿರುವ ಕುರಿತು ಮಾಹಿತಿ ಲಭ್ಯವಾಗಿತ್ತು.  ಕಾರ್ಯಾಚರಣೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು, ಆರು ಮಂದಿ ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಸಾವಿಗೀಡಾಗಿದ್ದಾರೆ ಎಂದು ಸೇನೆ ಹೇಳಿದೆ.