250 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 16 ಮಂದಿ ಮೃತಪಟ್ಟಿರುವ ಭೀಕರ ದುರ್ಘಟನೆ ಇಂದು ನಡೆದಿದೆ. 

ಡೆಹ್ರಾಡೂನ್ : 250 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 16 ಮಂದಿ ಮೃತಪಟ್ಟಿರುವ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉತ್ತರಾಖಂಡ್ ಸಾರಿಗೆ ಇಲಾಖೆಗೆ ಸೇರಿದ ಬಸ್ ರಿಶಿಕೇಶ ಹಾಗೂ ಗಂಗೋತ್ರಿ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 

ಚಾಲಕನ ನಿಯಂತ್ರ ತಪ್ಪಿ ಅತ್ಯಂತ ಆಳದ ಕಂದಕ್ಕೆ ಬಸ್ ಉರುಳಿ ಬಿದ್ದಿದೆ. ಈ ವೇಳೆ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. 

ಈ ಬಸ್ ನಲ್ಲಿ ಒಟ್ಟು 25 ಮಂದಿ ಪ್ರಯಾಣಿಸುತ್ತಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ನೆರವಿಗೆ ಹೆಲಿಕಾಪ್ಟರ್ ಧಾವಿಸಿ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಇದು ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಾಳುಗಳ ಕುಟುಂಬಕ್ಕೆ 50 ಸಾವಿರ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.