ಮದುವೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದೊಯ್ಯುತ್ತಿದ್ದ ಟ್ರಕ್ ಒಂದು ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದು, 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆ ಗುಜರಾತ್’ನ ಭವಾನಗರ್ ಪ್ರದೇಶದಲ್ಲಿ ಸಂಭವಿಸಿದೆ.
ಗುಜರಾತ್ : ಮದುವೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದೊಯ್ಯುತ್ತಿದ್ದ ಟ್ರಕ್ ಒಂದು ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದು, 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆ ಗುಜರಾತ್’ನ ಭವಾನಗರ್ ಪ್ರದೇಶದಲ್ಲಿ ಸಂಭವಿಸಿದೆ.
ಈ ವೇಳೆ ಅತ್ಯಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮದುವೆಗೆ ತೆರಳಲೆಂದು ಅನಿದಾ ಪ್ರದೇಶದಿಂದ ತೆರಳುತ್ತಿದ್ದ ವೇಳೆ ಇಂದು ಮುಂಜಾನೆ 7.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.
ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
