ಅಥಣಿಯಲ್ಲಿ ಕಾಂಗ್ರೆಸ್‌ನಿಂದ ಸ್ಥಳೀಯ, ಜಿಲ್ಲಾ ನಾಯಕರು ಸ್ಪರ್ಧಿಸಲಿ ಅಥವಾ ರಾಜ್ಯ ನಾಯಕರನ್ನೇ ಕರೆತಂದು ಸ್ಪರ್ಧೆಗಿಳಿಸಲಿ. ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೂ ಸ್ವಾಗತಿಸಿ, ಅದನ್ನು ಸವಾಲಾಗಿ ಸ್ವೀಕರಿಸುತ್ತೇನೆ ಎಂದರು.

ಅಥಣಿ: ಹಲವಾರು ವರ್ಷಗಳಿಂದ ಜನಪರ ಕಾರ್ಯಗಳಿಂದ ಅಥಣಿಯನ್ನು ಬಿಜೆಪಿ ಭದ್ರಕೋಟೆಯನ್ನಾಗಿಸಿದ್ದೇವೆ. ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಷ್ಟೇ ಅಲ್ಲ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರೇ ಸ್ಪರ್ಧಿಸಿದರೂ ಹೆದರುವುದಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಶನಿವಾರ ನಾನಾ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಮುಂದಿನ ಚುನಾವಣೆಗೆ ಅಥಣಿಯಲ್ಲಿ ಕಾಂಗ್ರೆಸ್‌ನಿಂದ ಸ್ಥಳೀಯ, ಜಿಲ್ಲಾ ನಾಯಕರು ಸ್ಪರ್ಧಿಸಲಿ ಅಥವಾ ರಾಜ್ಯ ನಾಯಕರನ್ನೇ ಕರೆತಂದು ಸ್ಪರ್ಧೆಗಿಳಿಸಲಿ. ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೂ ಸ್ವಾಗತಿಸಿ, ಅದನ್ನು ಸವಾಲಾಗಿ ಸ್ವೀಕರಿಸುತ್ತೇನೆ ಎಂದರು.

ಕನ್ನಡಪ್ರಭ ವಾರ್ತೆ
epaper.kannadaprabha.in

(ಲಕ್ಷ್ಮಣ್ ಸವದಿಯವರ ಸಂಗ್ರಹ ಚಿತ್ರ)