ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಘಟನೆ ದೇಶದಾದ್ಯಂತ ಸುದ್ದಿಯಾಗಿತ್ತು. ರಾಜ್ಯ ಪೊಲೀಸರು ಈತನಿಗಾಗಿ ಶೋಧ ನಡೆಸಿದರೂ ಆರೋಪಿ ಸಿಕ್ಕಿರಲಿಲ್ಲ.

ಬೆಂಗಳೂರು(ಮಾ.06): ನಗರದ ಎಟಿಎಂ'ನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪಿ ಮಧುಕರ್ ರೆಡ್ಡಿಯನ್ನು ಎಸ್.ಜೆ. ಪಾರ್ಕ್ ನಗರ ಪೊಲೀಸರು ಆಂಧ್ರ ಪ್ರದೇಶ ಪಿಲೇರು ಜೈಲಿನಿಂದ ಬೆಂಗಳೂರಿಗೆ ಕರೆ ತಂದಿದ್ದಾರೆ.

Add Asianetnews Kannada as a Preferred SourcegooglePreferred

ಬಾಡಿ ವಾರೆಂಟ್ ಮೂಲಕ ಆರೋಪಿಯನ್ನು ಕರೆ ತಂದಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.ವಿಕ್ಟೋರಿಯ ಆಸ್ಪತ್ರೆಯಲ್ಲಿ ಮಧುಕರ್ ರೆಡ್ಡಿಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ನಾಳೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರು ಪಡಿಸಲಿದ್ದಾರೆ.

ನಗರದ ಟೌನ್'ಹಾಲ್ ಬಳಿಯ ಕಾರ್ಪೋರೇಷನ್ ಬ್ಯಾಂಕ್'ನಲ್ಲಿ 2013ರಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಎಂಬುವವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಹಣ ದೋಚಿ ಪರಾರಿಯಾಗಿದ್ದ. ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಘಟನೆ ದೇಶದಾದ್ಯಂತ ಸುದ್ದಿಯಾಗಿತ್ತು. ರಾಜ್ಯ ಪೊಲೀಸರು ಈತನಿಗಾಗಿ ಶೋಧ ನಡೆಸಿದರೂ ಆರೋಪಿ ಸಿಕ್ಕಿರಲಿಲ್ಲ. ಕೆಲವು ದಿನಗಳ ಹಿಂದೆ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಸಿಕ್ಕಿಬಿದ್ದಿದ್ದ.