ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ವೈದ್ಯಕೀಯ ಚಿಕಿತ್ಸೆ ಬಗ್ಗೆ ತನಿಖೆ ನಡೆಸಬೇಕೆಂದು ಪನ್ನೀರ್ ಸೆಲ್ವಂ ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.

ಚೆನ್ನೈ (ಮಾ.03): ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ವೈದ್ಯಕೀಯ ಚಿಕಿತ್ಸೆ ಬಗ್ಗೆ ತನಿಖೆ ನಡೆಸಬೇಕೆಂದು ಪನ್ನೀರ್ ಸೆಲ್ವಂ ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.

ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ಕರೆದುಕೊಂಡು ಹೋಗಬೇಕೆಂದಿದ್ದೆ. ದುರಾದೃಷ್ಟವಶಾತ್ ಇದು ಈಡೇರಲೇ ಇಲ್ಲ. ಜಯಲಲಿತಾರಿಗೆ ಚಿಕಿತ್ಸೆ ನೀಡಿದ ವೈದ್ಯರ ಜೊತೆ ನಾನು ಮಾತುಕತೆ ನಡೆಸಿದ್ದೇನೆ.

ಅಮ್ಮನಿಗೆ ನೀಡಿರುವ ಚಿಕಿತ್ಸೆಯ ಬಗ್ಗೆ ಅನುಮಾನಗಳಿವೆ. ಅವರು ದೀರ್ಘಕಾಲದಿಂದ ಬಳಲುತ್ತಿರಲಿಲ್ಲ. ಅಂತದ್ದರಲ್ಲಿ ದಿಢೀರನೇ ಸಾವನ್ನಪ್ಪಿದ್ದಾರೆ. ಅವರ ಸಾವಿನ ಬಗ್ಗೆ ಸರ್ಕಾರ ತನಿಖೆ ನಡೆಸಬೇಕೆಂದು ನಾವು ಬಯಸುತ್ತೇವೆ. ಸತ್ಯ ಹೊರಬಂದು ಅನುಮಾನಗಳಿಗೆ ತೆರೆ ಬೀಳಬೇಕು ಎಂದು ಪನ್ನೀರ್ ಸೆಲ್ವಂ ಹೇಳಿದ್ದಾರೆ.

ಸರ್ಕಾರ ಒಂದು ವೇಳೆ ತನಿಖೆಗೆ ಆಗ್ರಹಿಸದಿದ್ದರೆ ಮಾ.08 ರಿಂದ ನಮ್ಮ ಬೆಂಬಲಿಗರೊಂದಿಗೆ ನಾನು ಉಪವಾಸ ಸತ್ಯಾಗ್ರಹ ಕೂರುತ್ತೇನೆ ಎಂದು ಎಚ್ಚರಿಸಿದ್ದಾರೆ.