ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು 1.60 ಲಕ್ಷ ಸರ್ಕಾರಿ ಪ್ರಾಥಮಿಕ ಶಾಲೆಗಳು ಆಚರಿಸಬೇಕೆಂದು ಉತ್ತರ ಪ್ರದೇಶದ ಮೂಲಭೂತ ಶಿಕ್ಷಣ ಸಚಿವ ಅನುಪಮ ಜೈಸ್ವಾಲ್ ಆದೇಶ ಹೊರಡಿಸಿದ್ದಾರೆ.

ನವದೆಹಲಿ(ಸೆ.08): ಉತ್ತರ ಪ್ರದೇಶ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಸೆ.17ರಂದು ಭಾನುವಾರ ತೆರೆಯಬೇಕೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು 1.60 ಲಕ್ಷ ಸರ್ಕಾರಿ ಪ್ರಾಥಮಿಕ ಶಾಲೆಗಳು ಆಚರಿಸಬೇಕೆಂದು ಉತ್ತರ ಪ್ರದೇಶದ ಮೂಲಭೂತ ಶಿಕ್ಷಣ ಸಚಿವ ಅನುಪಮ ಜೈಸ್ವಾಲ್ ಆದೇಶ ಹೊರಡಿಸಿದ್ದಾರೆ.

ಆಯಾ ಕ್ಷೇತ್ರದ ಶಾಸಕರು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ತೆರಳಿ ಮೋದಿ ಅವರ ಹುಟ್ಟುಹಬ್ಬವನ್ನು ಆಚರಿಸುವುದರೊಂದಿಗೆ ಅವರ ಪ್ರಮುಖ ಸಂದೇಶ ಶುಚಿತ್ವ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕು' ಎಂದು ಜೈಸ್ವಾಲ್ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಮಕ್ಕಳ ನಿಜವಾದ ಸ್ಫೂರ್ತಿ ಹಾಗೂ ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಬಲ ವ್ಯಕ್ತಿ. ಈ ಕಾರಣಕ್ಕಾಗಿ ಶಾಲೆಗಳಲ್ಲಿ ಮೋದಿಯವರ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಚಂದ್ರಮೋಹನ್ ಹೇಳಿದ್ದಾರೆ.