ಬೆಂಗಳೂರು(ನ.09): ವಿವಾದಿತ ಆಯೋಧ್ಯೆ ತೀರ್ಪು ಪ್ರಕಟಿಸಲು ಸುಪ್ರೀಂ ಕೋರ್ಟ್ ಸಜ್ಜಾಗಿದೆ. ನಾಳೆ(ನ.9) ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ. ತೀರ್ಪು ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹಲವೆಡೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ರಾಜ್ಯದೆಲ್ಲೆಡೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಇದನ್ನೂ ಓದಿ: ನಾಳೆ ಅಯೋಧ್ಯೆ ತೀರ್ಪು: ದೇಶಾದ್ಯಂತ ಕಟ್ಟೆಚ್ಚರ!

ನಾಳೆ(ನ.09) ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆ ವರೆಗೆ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಅಯೋಧ್ಯೆ ತೀರ್ಪು ಪ್ರಕಟಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹದ್ದಿನ ಕಣ್ಣಿಡಲಾಗಿದೆ.

ಇದನ್ನೂ ಓದಿ: ಆಯೋಧ್ಯೆ ತೀರ್ಪು; ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ!.

ರಂಜನ್ ಗೊಗೋಯ್ ನೇತೃತ್ವದ ಪೀಠ ಅಯೋಧ್ಯೆ ತೀರ್ಪು ಪ್ರಕಟಿಸಲಿದೆ. ದಶಕಗಳಿಂದ ನಡೆಯುತ್ತಿದ್ದ ಅಯೋಧ್ಯೆ ಕಾನೂನು ಹೋರಾಟಕ್ಕೆ ನಾಳೆ ಪೂರ್ಣವಿರಾಮ ಬೀಳಲಿದೆ. ಹೀಗಾಗಿ ಧಾರ್ಮಿಕ ಕೇಂದ್ರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.