ಬೆಂಗಳೂರು(ನ.08): ವಿವಾದಿತ ಆಯೋಧ್ಯೆ ತೀರ್ಪು ಪ್ರಕಟಿಸಲು ಸುಪ್ರೀಂ ಕೋರ್ಟ್ ಸಜ್ಜಾಗಿದೆ. ನವೆಂಬರ್ 9 ರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್‌ನ ಐವರು ಸದಸ್ಯರ ಪೀಠ ಸ್ಪಷ್ಟಪಡಿಸಿದೆ. ಇದರ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಹಲೆವೆಡೆ 144 ನಿಷೇದಾಜ್ಞೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ನಾಳೆ ಅಯೋಧ್ಯೆ ತೀರ್ಪು: ದೇಶಾದ್ಯಂತ ಕಟ್ಟೆಚ್ಚರ!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು ರಾತ್ರಿ 12 ಗಂಟೆಯಿಂದ ನಿಷೇಧಾಜ್ಞೆ ಜಾರಿಯಾಗಲಿದೆ.

ಉತ್ತರಕನ್ನಡ ಹಾಗೂ ಕಾರವಾರಗಳಲ್ಲಿನ ಸೂಕ್ಷ್ಮ ಪ್ರದೇಶಗಳಲ್ಲಿ 144 ನಿಷೇಧಾಜ್ಞೆ ಜಾರಿ ಮಾಡಲು ನಿರ್ಧರಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸಿವಿಲ್ ಪೊಲೀಸ್, 5 ಕೆಎಸ್‌ಆರ್‌ಪಿ ಹಾಗೂ ಡಿಎಆರ್ ತುಕುಡಿಗಳ ನಿಯೋಜನೆ ಮಾಡಲಾಗಿದೆ. ಇನ್ನು ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚಲು ಡಿಸಿ ಸೂಚನೆ  ನೀಡಿದ್ದಾರೆ. 

ಧಾರವಾಡ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರಿಗೆ ಎಸ್ಪಿ ಮನವಿ ಮಾಡಿದ್ದಾರೆ. ನಾಳೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. 

ಇದನ್ನೂ ಓದಿ: ಆಯೋಧ್ಯೆ ತೀರ್ಪು; ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ!

ವಿಜಯಪುರದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.  ಜೆಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲು ಜಿಲ್ಲಾಧಿಕಾರಿ ವೈ ಎಸ್ ಪಾಲೀಟ್ ಸೂಚಿಸಿದ್ದಾರೆ. ಈ ಕುರಿತು ಸುವರ್ಣನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ ಪಾಟೀಲ್ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ ಎಂದಿದ್ದಾರೆ.  ಮುಂಜಾಗೃತಾ ಕ್ರಮವಾಗಿ 3 ಕೆಎಸ್ಆರ್‌ಪಿ ತುಕಡಿ ಹಾಗೂ 10 ಡಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲ ಈ ಕ್ಷಣದಿಂದಲೇ ಪೊಲೀಸ್ ಅಧಿಕಾರಿಗಳಿಗೆ ಎಲ್ಲೆಡೆ ಪೆಟ್ರೊಲಿಂಗ್ ನಡೆಸಲು ಎಸ್‌ಪಿ ಪ್ರಕಾಶ ನಿಕ್ಕಂ ಸೂಚನೆ ನೀಡಿದ್ದಾರೆ. ಜೊತೆ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡಲಾಗಿದೆ.

ಕಲಬುರಗಿ ನಗರದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ನಾಲ್ಕು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. 

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಹುಬ್ಬಳಿ, ಧಾರವಾಡ ಸೇರಿದಂತೆ ಹಲೆವೆಡೆ 144 ಸೆಕ್ಷನ್ ಜಾರಿ ಮಾಡಲಾಗಿದೆ. 
--