ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದ್ದರೂ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧವನ್ನು ಹಿಂಪಡೆದಿರುವ ಬಗ್ಗೆ ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲವೆಂಬ ಕಾರಣಕ್ಕಾಗಿ ಅಜರ್ ನಾಮಪತ್ರ ತಿರಸ್ಕೃತಗೊಂಡಿತ್ತು.
ಹೈದರಾಬಾದ್ (ಜ.17): ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್’ಸಿಎ) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರತಿರಸ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದ್ದರೂ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧವನ್ನು ಹಿಂಪಡೆದಿರುವ ಬಗ್ಗೆ ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲವೆಂಬ ಕಾರಣಕ್ಕಾಗಿ ಅಜರ್ ನಾಮಪತ್ರ ತಿರಸ್ಕೃತಗೊಂಡಿತ್ತು.
ಅಜರ್ ಈ ಕುರಿತಂತೆ ಪತ್ರ ಬರೆದು ಕೋರಿದರೂ, ಬಿಸಿಸಿಐನಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ ಎನ್ನಲಾಗಿದೆ.
2000ದ ದ.ಆಫ್ರಿಕಾ ವಿರುದ್ಧದ ಸರಣಿಯ ವೇಳೆ ಮ್ಯಾಚ್ ಫಿಕ್ಸಿಂಗ್ ಆರೋಪದಡಿಅಜರ್ ಬಿಸಿಸಿಐನಿಂದ ಆಜೀವ ನಿಷೇಧಕ್ಕೆ ಗುರಿಯಾಗಿದ್ದರು. 1992, 1996, 1999ರ ವಿಶ್ವಕಪ್‌ನಲ್ಲಿ ಅಜರ್ ಭಾರತವನ್ನು ಮುನ್ನಡೆಸಿದ್ದರು.