ಮಾನವೀಯ ಸೇವೆಗಾಗಿ ನೀಡಲಾಗುವ ಪ್ರತಿಷ್ಠಿತ ‘ಕಾರ್ನೆಗಿ' ಪ್ರಶಸ್ತಿ'ಗೆ ವಿಪ್ರೊ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಆಯ್ಕೆಯಾಗಿದ್ದಾರೆ. ಭಾರತದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ಮಾಡಿದ ಪ್ರಯತ್ನಗಳನ್ನು ಗುರುತಿಸಿ ಪ್ರೇಮ್‌ಜಿ ಯವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ.

ನ್ಯೂಯಾರ್ಕ್: ಮಾನವೀಯ ಸೇವೆಗಾಗಿ ನೀಡಲಾಗುವ ಪ್ರತಿಷ್ಠಿತ ‘ಕಾರ್ನೆಗಿ' ಪ್ರಶಸ್ತಿ'ಗೆ ವಿಪ್ರೊ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಆಯ್ಕೆಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ಮಾಡಿದ ಪ್ರಯತ್ನಗಳನ್ನು ಗುರುತಿಸಿ ಪ್ರೇಮ್‌ಜಿ ಯವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ.

2017ರ ಕಾರ್ನೇಜಿ ಮಾನವೀಯತೆಯ ಪದಕಕ್ಕೆ ಆಯ್ಕೆಯಾದ 7 ಜನರಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್‌ನ ಪ್ರೇಮ್‌ಜಿ ಕೂಡ ಒಬ್ಬರು.

ವಿಪ್ರೊ ಸಂಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ ಪ್ರೇಮ್‌ಜಿ, ಸಾರ್ವಜನಿಕ ಶಿಕ್ಷಣದಲ್ಲಿ ಸುಧಾರಣೆ ತರಲು ಸಾಕಷ್ಟುಯತ್ನ ನಡೆಸಿದ್ದಾರೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಅಭಿಪ್ರಾಯಪಟ್ಟಿದೆ.