ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು (ಡಿ.12): ಬಿಜೆಪಿಯ ಪರಿವರ್ತನಾ ಯಾತ್ರೆಗೆ ಪರ್ಯಾಯವಾಗಿ ಕಾಂಗ್ರೆಸ್ ಆರಂಭಿಸುತ್ತಿರುವ ಸತ್ಯಯಾತ್ರೆಯ ಬಗ್ಗೆ ಆ ಪಕ್ಷದಲ್ಲೇ ಗೊಂದಲಗಳಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಪರಿವರ್ತನಾ ರ್ಯಾಲಿಯಲ್ಲಿ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ, ಹಿರಿಯ ನಾಯಕ ಡಾ. ಪರಮೇಶ್ವರ ಇಬ್ಬರೂ ಪ್ರತ್ಯೇಕ ರಥಯಾತ್ರೆ ಹೊರಟಿದ್ದಾರೆ. ಅವರು ಎಂದಿಗೂ ಒಂದಾಗಿ ಹೋಗಿಲ್ಲ, ಹೋಗೋದೂ ಇಲ್ಲ ಎಂದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಬಂಜಾರ ಸಮಾಜದ ಬೇಡಿಕೆಯಾಗಿರುವ ಸೇವಾಲಾಲ್ ಜಯಂತಿಯನ್ನು ಸರ್ಕಾರದಿಂದಲೇ ಆಚರಣೆ ಮಾಡುವ ಭರವಸೆ ನೀಡಿದರು.
