ಚಿತ್ರದುರ್ಗ (ಸೆ.10): ವೈದ್ಯರ ಲಂಚಾವತಾರ ಹಾಗೂ ನಿರ್ಲಕ್ಷ್ಯಕ್ಕೆ ಹೆಣ್ಣು ಶಿಶುವೊಂದು ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಜಿಲ್ಲಾಸ್ಪತ್ರೆ ಪ್ರಸೂತಿ ತಜ್ಞ ಡಾ. ಶಿವಕುಮಾರ್ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಸುಪ್ರಿಯಾ ನಾಲ್ಕು ದಿನಗಳ ಹಿಂದೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಸೀಜರಿಯನ್ ಮೂಲಕ ಹೆರಿಗೆ ಮಾಡಿಸಲಾಗಿದೆ. ಆದರೆ ಹೆರಿಗೆ ಬಳಿಕ ಮಗುವಿಗೆ ಸೂಕ್ತ ಚಿಕಿತ್ಸೆ ನೀಡದೇ ಡಾ. ಶಿವಕುಮಾರ್ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ.

ಹೀಗಾಗಿ ನವಜಾತ ಶಿಶು ಸಾವನ್ನಪ್ಪಿದೆ ಅಂತಾ ಸುಪ್ರಿತಾ ಆರೋಪಿಸಿದ್ದಾರೆ. ಜತೆಗೆ ಹೆರಿಗೆ, ಹಾಗೂ ಚಿಕಿತ್ಸೆ ಉಚಿತವಾಗಿದ್ದರೂ ಪ್ರಸೂತಿ ವೈದ್ಯ ಶಿವಕುಮಾರ್​ 5000 ರೂಪಾಯಿ ಲಂಚ ಹಣವನ್ನ ಪಡೆದಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಹೀಗಾಗಿ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಜಿಲ್ಲಾ ಸರ್ಜನ್​ಗೆ ಸಂಬಂಧಿಕರು ದೂರು ನೀಡಿದ್ದಾರೆ.