ಎರಡು ವರ್ಷದ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ಎರಡು ವರ್ಷದ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಸವರಾಜು ಹಾಗೂ ವೆಂಕಮ್ಮ ದಂಪತಿಯ ಮಗು ವೆಂಕಟೇಶನನ್ನು ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಈರಣ್ಣ ಎಂಬಾತ ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ.

 2 ದಿನಗಳ ಹಿಂದೆಯಷ್ಟೇ ಈರಣ್ಣ ಹಾಗೂ ಬಸವರಾಜು ಕುಟುಂಬಕ್ಕೆ ನಾಯಿಗೆ ಹಾಲು ಹಾಕುವ ಬಟ್ಟಲಿನ ವಿಚಾರವಾಗಿ ಜಗಳ ನಡೆದಿತ್ತು. ಈ ಜಗಳದ ಹಿನ್ನೆಲೆಯಲ್ಲಿಯೇ ಕೊಲೆ ಮಾಡಿರಬಹುದು ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ. ಮಗುವಿನ ಕುತ್ತಿಗೆಯನ್ನು ತುಳಿದು ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.