ಈ ಈಮೇಲ್ ಪ್ರತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರು(ಆ.12): ಹಿಂದಿ ಹೇರಿಕೆ ಹಾಗೂ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜದ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಬೆಂಗಳೂರಿನ ಪ್ರತಿಷ್ಠಿತ ರಾಷ್ಟ್ರೀಯ ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರಿಗೆ ಕನ್ನಡ ದ್ವಜ ನಿಷೇಧಿಸಬೇಕೆಂದು ಕೋರಿ ಕಳುಹಿಸಲಾಗಿದೆಯೆನ್ನಲಾದ ಈಮೇಲ್ ಪ್ರತಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಕಾಲೇಜು ಕ್ಯಾಂಪಸ್’ನಲ್ಲಿ ಕನ್ನಡ ಧ್ವಜ ಹಾರಿಸುವುದರಿಂದ ದೇಶದ ಏಕತೆ ಹಾಗೂ ಸಮಗ್ರತೆಗೆ ಧಕ್ಕೆಯುಂಟಾಗುವ ಹಿನ್ನೆಲೆಯಲ್ಲಿ ಕ್ಯಾಂಪಸ್’ನಲ್ಲಿರುವ ಕನ್ನಡ ಧ್ವಜಗಳನ್ನು ತೆಗೆಸಿರಿ ಅಥವಾ ಅದರ ಬದಲಿಗೆ ಭಾರತದ ತ್ರಿವರ್ಣ ಧ್ವಜ ಹಾರಿಸಿರಿ ಎಂದು ಮಧುಪ್ ಗುಪ್ತಾ ಎಂಬ ವಿದ್ಯಾರ್ಥಿ ಪ್ರಾಂಶುಪಾಲರಿಗೆ ಕಳೆದ ಜು.20ರಂದು ಈಮೇಲ್ ಮಾಡಿದ್ದಾನೆ. ಈ ಈಮೇಲ್ ಪ್ರತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
