[ಜೂ.14]ಬೆಂಗಳೂರು: ಸಚಿವ ಸಂಪುಟದಿಂದ ನನ್ನನ್ನು ಕೈಬಿಡುವ ಬಗ್ಗೆಯಾಗಲಿ ಅಥವಾ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನೀಡುವ ವಿಚಾರವಾಗಲಿ ತಮಗೆ ಗೊತ್ತಿಲ್ಲ. ಪಕ್ಷದ ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡಲಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದಲ್ಲಿ ಎಲ್ಲರೂ ಶಾಸಕ ವಿಶ್ವನಾಥ್ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವಂತೆ ಒತ್ತಾಯ ಮಾಡಿದ್ದಾರೆ. ಪಕ್ಷದ ವರಿಷ್ಠರು ಸಹ ಮನವಿ ಮಾಡಿದ್ದು, ವಿಶ್ವನಾಥ್ ಅವರನ್ನೇ ರಾಜ್ಯಾಧ್ಯಕ್ಷರಾಗಿ ಮುಂದುವರಿಸುವ ವಿಶ್ವಾಸ ಇದೆ. ಆದರೆ, ತಮ್ಮನ್ನು ಸಂಪುಟದಿಂದ ಕೈಬಿಡುವ ವಿಚಾರ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನೀಡುವ ವಿಷಯದ ಬಗ್ಗೆ ನನಗೆ ಮಾಹಿತಿ ಇಲ್ಲ. ಎಲ್ಲವನ್ನೂ ಪಕ್ಷದ ಹೈಕಮಾಂಡ್ ನೋಡಿಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಶುಕ್ರವಾರ ನಡೆಯುವ ಸಚಿವ ಸಂಪುಟದಲ್ಲಿ ಇಬ್ಬರು ಪಕ್ಷೇತರ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಂಡೆಪ್ಪ ಹೇಳಿದರು.