ಹಾಸನ ಬಂದ್ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಸಾರಿಗೆ ಬಸ್ ಸಂಚಾರ, ಆಟೋ ಸಂಚಾರ ಯಥಾಸ್ಥಿತಿಯಾಗಿತ್ತು. ಜನ ಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.

ಹಾಸನ (ಫೆ.25): ಹೇಮಾವತಿಯಿಂದ‌ ಕೆಆರ್’ಎಸ್ ಮೂಲಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಇಂದು ಹಾಸನ ಬಂದ್​​​’ಗೆ ಜೆಡಿಎಸ್ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದವು.

10 ಗಂಟೆ ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಜೆಡಿಎಸ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಹಾಸನ ಬಂದ್ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಸಾರಿಗೆ ಬಸ್ ಸಂಚಾರ, ಆಟೋ ಸಂಚಾರ ಯಥಾಸ್ಥಿತಿಯಾಗಿತ್ತು. ಜನ ಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.