ಅಯ್ಯಪ್ಪ,ಲಿನೋ,ಸುದೇಶ್, ಸೋಮಶೇಖರ್ ಬಂಧಿತರು. ಅಯ್ಯಪ್ಪ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಆರೋಪಿಗಳಲ್ಲಿ ಮೂವರು ಡೆಲಿವರಿ ಬಾಯ್ಸ್, ಒಬ್ಬ ಕ್ಯಾಬ್ ಚಾಲಕನಾಗಿದ್ದಾನೆ. ಬಂಧಿತರಿಂದ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು(ಜ.5): ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು 48 ಗಂಟೆಗಳಲ್ಲಿ ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಅಯ್ಯಪ್ಪ,ಲಿನೋ,ಸುದೇಶ್, ಸೋಮಶೇಖರ್ ಬಂಧಿತರು. ಅಯ್ಯಪ್ಪ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಆರೋಪಿಗಳಲ್ಲಿ ಮೂವರು ಡೆಲಿವರಿ ಬಾಯ್ಸ್, ಒಬ್ಬ ಕ್ಯಾಬ್ ಚಾಲಕನಾಗಿದ್ದಾನೆ. ಬಂಧಿತರಿಂದ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಮುಖ್ಯ ಆರೋಪಿ ಐಟಿಐ ವ್ಯಾಸಂಗ ಮಾಡಿದ್ದಾನೆ ಇನ್ನುಳಿದ ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು. ನಗರದಲ್ಲಿ ಇಂತಹ ಘಟನೆಗಳು ಸಂಭವಿಸಿದರೆ ದೌರ್ಜನ್ಯಕ್ಕೊಳಗಾದವರು ಪೊಲೀಸರಿಗೆ ದೂರು ನೀಡಲು ಹಿಂಜರಿಯಬಾರದು. ಸಾರ್ವಜನಿಕರು ಸಹ ಆರೋಪಿಗಳ ಪತ್ತೆಗೆ ಸಹಕಾರ ನೀಡಬೇಕು ಎಂದು ಆಯುಕ್ತರು ತಿಳಿಸಿದ್ದಾರೆ.