ಬೆಂಗಳೂರು:  ಬೆಂಗಳೂರು ಪ್ರೆಸ್‌ಕ್ಲಬ್‌ ಪ್ರತಿ ವರ್ಷ ನೀಡುವ ಪ್ರತಿಷ್ಠಿತ ‘ಪ್ರೆಸ್‌ಕ್ಲಬ್‌ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಇಸ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ವಿಜಯ ಕರ್ನಾಟಕ ಸಂಪಾದಕ ತಿಮ್ಮಪ್ಪ ಭಟ್‌ ಸೇರಿ 15 ಪತ್ರಕರ್ತರು ‘ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

ಡಿ.31ರಂದು ಪ್ರೆಸ್‌ಕ್ಲಬ್‌ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವಾರ್ಷಿಕ ಪ್ರಶಸ್ತಿ ಪುರಸ್ಕೃತರು: ಕೆ.ಎನ್‌. ತಿಲಕ್‌ಕುಮಾರ್‌, ಕೆ.ಎಸ್‌. ಸಚ್ಚಿದಾನಂದ ಮೂರ್ತಿ (ಸಚ್ಚಿ), ಎ. ಬಾಲಚಂದ್ರ, ವೆಂಕಟನಾರಾಯಣ, ರಾಮಣ್ಣ ಎಚ್‌. ಕೋಡಿ ಹೊಸಹಳ್ಳಿ, ತುಂಗಾ ರೇಣುಕ, ಕೆ.ವಿ. ಪ್ರಭಾಕರ್‌, ಡಿ.ಸಿ. ನಾಗೇಶ್‌, ರಾಜಶೇಖರ ಹತಗುಂದಿ, ವೇದಂ ಜಯಶಂಕರ್‌, ರಾಜಶೇಖರ ಅಬ್ಬೂರು, ಶಿವಾಜಿ ಗಣೇಶನ್‌ ಹಾಗೂ ಕೆ. ಬದ್ರುದ್ದೀನ್‌ ಮಾಣಿ ಅವರು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ ಎಂದು ಪ್ರೆಸ್‌ಕ್ಲಬ್‌ ಪ್ರಕಟಣೆ ತಿಳಿಸಿದೆ.