ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅವರದೇ ಅಶ್ಲೀಲ ವಿಡಿಯೋಗಳನ್ನು ಅಪ್ ಲೋಡ್ ಮಾಡಿದ ಬೆಂಗಳೂರು ಉತ್ತರ ಜಿಲ್ಲೆಯ ಡಯಟ್ ಪ್ರಭಾರಿ ಪ್ರಾಂಶುಪಾಲರನ್ನು ಕರ್ತವ್ಯ ಲೋಪದ ಅಡಿಯಲ್ಲಿ ಅಮಾನತು ಮಾಡಲಾಗಿದೆ. 

ಬೆಂಗಳೂರು: ಕಚೇರಿಗೆ ಸಂಬಂಧಿಸಿದ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅವರದೇ ಅಶ್ಲೀಲ ವಿಡಿಯೋಗಳನ್ನು ಅಪ್ ಲೋಡ್ ಮಾಡಿದ ಬೆಂಗಳೂರು ಉತ್ತರ ಜಿಲ್ಲೆಯ ಡಯಟ್ ಪ್ರಭಾರಿ ಪ್ರಾಂಶುಪಾಲ ಎಸ್.ಎಂ. ರಮೇಶ್ ಅವರನ್ನು ಕರ್ತವ್ಯ ಲೋಪದ ಆಧಾರದ ಮೇಲೆ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅಪ್‌ಲೋಡ್ ಆಗಿರುವ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕೂಡ ಪ್ರಸಾರವಾಗಿವೆ. ಶಿಕ್ಷಕರ ದಿನಾಚರಣೆ ದಿನದಂದೇ ಈ ಘಟನೆ ಸಂಭವಿಸಿರುವುದು ಶೈಕ್ಷಣಿಕ ಮೌಲ್ಯ, ಶಿಕ್ಷಕರ ಗೌರವಕ್ಕೆ ಧಕ್ಕೆ ಉಂಟಾಗಿದೆ.
ಇಲಾಖೆ ಮತ್ತು ಸರ್ಕಾರಕ್ಕೆ ಮುಜುಗರ ತಂದಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ವಿಚಾರಣೆ ಮತ್ತು ಶಿಸ್ತುಕ್ರಮ ಕಾಯ್ದಿರಿಸಿ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಡಿ. ನಾಗೇಂದ್ರ ಆದೇಶಿಸಿದ್ದಾರೆ.