ಹೊಸ ವರ್ಷಾಚರಣೆ ವೇಳೆ ಎಂಜಿ ರಸ್ತೆಯಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಬಗ್ಗೆ ಸುವರ್ಣ ನ್ಯೂಸ್ ವರದಿಗೆ ಎಚ್ಚೆತ್ತ ಬೆಂಗಳೂರು ಪೊಲೀಸರು ಮಾಲಿನಿ ಕೃಷ್ಣ ಮೂರ್ತಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಬೆಂಗಳೂರು (ಜ.02): ಹೊಸ ವರ್ಷಾಚರಣೆ ವೇಳೆ ಎಂಜಿ ರಸ್ತೆಯಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಬಗ್ಗೆ ಸುವರ್ಣ ನ್ಯೂಸ್ ವರದಿಗೆ ಎಚ್ಚೆತ್ತ ಬೆಂಗಳೂರು ಪೊಲೀಸರು ಮಾಲಿನಿ ಕೃಷ್ಣ ಮೂರ್ತಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣ ಮೂರ್ತಿ,ಕೇಂದ್ರ ವಿಭಾಗದ ನೂತನ ಡಿಸಿಪಿ ಚಂದ್ರಗುಪ್ತ ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಹೊಸ ವರ್ಷದಂದು ಎಂಜಿ ರಸ್ತೆಯಲ್ಲಿ ಕೆಲ ಪುಂಡರು ಯುವತಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಈ ಕುರಿತು ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು.
ವರ್ಷಾಚರಣೆ ವೇಳೆ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಬಗ್ಗೆ ಮಾಧ್ಯಮಗಳಲ್ಲಿ ಬಂದ ಸುದ್ದಿ ನೋಡಿದ್ದೇನೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದೇನೆ. ಇನ್ನಷ್ಟು ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಬೇಕಾಗಿದೆ.
ಘಟನೆ ನಡೆದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ಭದ್ರತೆಗಿದ್ದರು .ಆದರೂ ಈ ರೀತಿಯ ಘಟನೆ ನಡೆದಿದೆ. ಪರಿಶೀಲನೆ ಬಳಿಕ ಸುಮೋಟೋ ದಾಖಲಿಸಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಈ ಘಟನೆ ನಡೆದಿದೆ.
ದೌರ್ಜನ್ಯಕ್ಕೊಳಗಾದ ಯುವತಿಯರು ಠಾಣೆಗೆ ಬಂದು ದೂರು ಕೊಡಿ. ಟಿವಿ ಚಾನಲ್ಗಳಲ್ಲಿ ಬಂದ ದೃಶ್ಯಗಳನ್ನು ಪಡೆಯುತ್ತೇವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಹೇಳಿದ್ದಾರೆ.
