ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿ) ಮೇ 30 ರಿಂದ ಎರಡು ದಿನಗಳ ಕಾಲ ಅಖಿಲ ಭಾರತ ಮಟ್ಟದ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದ್ದು, ಬ್ಯಾಂಕಿಂಗ್ ಸೇವೆಯಲ್ಲಿ ತೀವ್ರತರ ವ್ಯತ್ಯಯವಾಗಲಿದೆ.
ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿ) ಮೇ 30 ರಿಂದ ಎರಡು ದಿನಗಳ ಕಾಲ ಅಖಿಲ ಭಾರತ ಮಟ್ಟದ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದ್ದು, ಬ್ಯಾಂಕಿಂಗ್ ಸೇವೆಯಲ್ಲಿ ತೀವ್ರತರ ವ್ಯತ್ಯಯವಾಗಲಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ, ಕರ್ಣಾಟಕ, ಸಿಂಡಿಕೇಟ್ ಹಾಗೂ ವಿಜಯಾ ಬ್ಯಾಂಕ್‌ಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿದ್ದಾರೆ.
ಗ್ರಾಮೀಣ ಬ್ಯಾಂಕ್‌ಗಳು ಹಾಗೂ ಸಹಕಾರಿ ಬ್ಯಾಂಕ್‌ಗಳು ಮುಷ್ಕರದಲ್ಲಿ ಭಾಗಿಯಾಗುತ್ತಿಲ್ಲ. ಖಾಸಗಿ ಬ್ಯಾಂಕ್ ಗಳಾದ ಎಚ್‌ಡಿಎಫ್‌ಸಿ, ಐಸಿಐಸಿಐ ಹಾಗೂ ಎಸ್ ಬ್ಯಾಂಕ್‌ಗಳ ನೌಕಕರು ಮುಷ್ಕರದಲ್ಲಿ ಭಾಗಿಯಾಗುವುದಿಲ್ಲ.
