ತಡ ರಾತ್ರಿಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಗಾಬರಿಯಾದ ಕುಟುಂಬ ವರ್ಗ ಇಂದು ಬೆಳಿಗ್ಗೆ ಆರ್.ಟಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಬೆಂಗಳೂರು(ಆ.16): ಸುಮನಹಳ್ಳಿಯ ರಿಂಗ್ ರಸ್ತೆಯ ಕಂಠೀರವ ಸ್ಟುಡಿಯೋ ಬಳಿ ಬ್ಯಾಂಕ್ ಮ್ಯಾನೇಜರ್ ಒಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪವಾಗಿ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.

ಮುನಿಯಪ್ಪ(55) ಮೃತರು. ಮೂಲತಃ ಹೊಸಕೋಟೆಯ ಸೊಣ್ಣೇಹಳ್ಳಿಪುರದವರಾದ ಇವರು, ಆರ್.ಟಿ. ನಗರದಲ್ಲಿ ವಾಸವಾಗಿದ್ದರು. ಕಳೆದ ಕೆಲ ವರ್ಷಗಳಿಂದ ಇವರು ಬೆಂಗಳೂರಿನ ಅಮೃತಹಳ್ಳಿ ಸುಧಾ ಕೋಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ನಿವ೯ಹಿಸುತ್ತಿದ್ದು,ನಿನ್ನೆ ಬ್ಯಾಂಕ್ ರಜೆ ಇದ್ದ ಕಾರಣ ಕೆಂಗೇರಿಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ತಮ್ಮ ಆಲ್ಟೋ ಕಾರಿನಲ್ಲಿ ಹೊರಟಿದ್ದರು.

ತಡ ರಾತ್ರಿಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಗಾಬರಿಯಾದ ಕುಟುಂಬ ವರ್ಗ ಇಂದು ಬೆಳಿಗ್ಗೆ ಆರ್.ಟಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕಾರಿನಲ್ಲಿ ಇವರ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.ಅಪರಿಚಿತರು ಕೊಲೆ‌ಮಾಡಿರುವುದಾಗಿ ಸಂಬಂಧಿಕರು ಆರೋಪಿಸಿದ್ದಾರೆ. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.