ಸೆ.26, 27 ಕ್ಕೆ ಬ್ಯಾಂಕ್ ನೌಕರರ ಮುಷ್ಕರವಿಲ್ಲ
10 ಬ್ಯಾಂಕ್‌ಗಳನ್ನು ವಿಲೀನಗೊಳಿಸಿ 4 ದೊಡ್ಡ ಬ್ಯಾಂಕ್ ರಚಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬ್ಯಾಂಕ್ ನೌಕಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸೆ.26, 27 ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಇದೀಗ ಈ ಮುಷ್ಕರವನ್ನು ಮುಂದೂಡಲಾಗಿದೆ.
ನವದೆಹಲಿ (ಸೆ. 24): ಬ್ಯಾಂಕ್‌ಗಳ ವಿಲೀನ ವಿರೋಧಿಸಿ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಕರೆಕೊಟ್ಟಿದ್ದ 2 ದಿನ ಗಳ ಬ್ಯಾಂಕ್ ಮುಷ್ಕರವನ್ನು ಮುಂದೂಡಿದೆ. ಬ್ಯಾಂಕ್ ವಿಲೀನ ಸಂಬಂಧ ಉದ್ಭವಿಸಿರುವ ಸಮಸ್ಯೆ ಪರಿಹರಿಸಲು ವಿಲೀನ ಗೊಳ್ಳುತ್ತಿರುವ ಬ್ಯಾಂಕ್‌ಗಳ ಅಧಿಕಾರಿಗಳನ್ನೊಳ ಗೊಂಡ ಸಮಿತಿ ರಚನೆ ಮಾಡಿ ಪರಿಹಾರ ಸೂಚಿಸಲಾಗುವುದು ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ಭರವಸೆ ನೀಡಿದ್ದರಿಂದ ಸೆ. 26 ಹಾಗೂ 27 ರಂದು ನಡೆಸಲು ತೀರ್ಮಾನಿಸಲಾಗಿದ್ದ 48 ಗಂಟೆಗಳ ಮುಷ್ಕರ ಮುಂದೂಡಲಾಗಿದೆ ಎಂದು ಸಂಘ ತಿಳಿಸಿದೆ.
ನೌಕರರ ಮುಷ್ಕರ, ಎರಡು ದಿನ ಬ್ಯಾಂಕ್ ಸೇವೆ ಸ್ಥಗಿತ!
10 ರಾಷ್ಟ್ರೀಕೃತ ಬ್ಯಾಂಕ್‌ಳನ್ನು ವಿಲೀನಗೊಳಿಸಿ 4 ದೊಡ್ಡ ಬ್ಯಾಂಕ್‌ಗಳಾಗಿ ಪರಿವರ್ತಿಸಲಾ ಗುವುದು ಎಂದು ಸರ್ಕಾರ ಆ.30 ರಂದು ಘೋಷಿಸಿತ್ತು.
ಬ್ಯಾಂಕ್ ನೌಕರರ ಬೇಡಿಕೆಗಳೇನು?
*10 ಬ್ಯಾಂಕ್‌ಗಳ ವಿಲೀನ ಮಾಡಿ 4 ಬ್ಯಾಂಕ್ ರಚಿಸುವ ನಿರ್ಧಾರ ಕೈಬಿಡಬೇಕು
* ತಕ್ಷಣವೇ ವೇತನ ಪರಿಷ್ಕರಣೆ ಮಾಡಬೇಕು
* ವಾರಕ್ಕೆ 5 ದಿನಗಳ ಕೆಲಸದ ನೀತಿ ಜಾರಿಗೆ ತರಬೇಕು
* ಬ್ಯಾಂಕ್‌ಗಳಲ್ಲಿ ಪ್ರಸಕ್ತ ಜಾರಿಯಲ್ಲಿರುವ ತನಿಖಾ ಕಾರ್ಯ ವಿಧಾನದಲ್ಲಿ ಬಾಹ್ಯ ಸಂಸ್ಥೆಗಳ ಹಸ್ತಕ್ಷೇಪ ನಿಲ್ಲಿಸಬೇಕು
* ನಿವೃತ್ತ ಸಿಬ್ಬಂದಿ ದೂರು ಇತ್ಯರ್ಥಪಡಿಸಬೇಕು
* ಅಗತ್ಯ ನೇಮಕಾತಿ ನಡೆಸಬೇಕು
* ಎನ್‌ಪಿಎಸ್ ರದ್ದು ಮಾಡಬೇಕು
* ಗ್ರಾಹಕರಿಗೆ ವಿಧಿಸುವ ಸೇವಾ ಶುಲ್ಕ ರದ್ದು ಮಾಡಬೇಕು
* ಕಾರ್ಯನಿರ್ವಹಣೆ ತೃಪ್ತಿಕರ ಇಲ್ಲ ಎಂಬ ಅನುಮಾನದ ಮೇಲೆ ವೃಥಾ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು
ಮುಂದುವರಿದ ಬ್ಯಾಂಕ್‌ಗಳ ವಿಲೀನ ಪರ್ವ; ಈ ಬಾರಿ ನಮ್ಮ-ನಿಮ್ಮ ಕಾರ್ಪ್, ಸಿಂಡಿಕೇಟ್, ಕೆನರಾ!
ಕಳೆದ ಆ.30ರಂದು ಸಾರ್ವಜನಿಕ ವಲಯದ 10 ಬ್ಯಾಂಕ್‌ಗಳನ್ನು ವಿಲೀನ ಮಾಡಿ 4 ದೊಡ್ಡ ಬ್ಯಾಂಕ್ ರಚನೆಯ ಘೋಷಣೆಯನ್ನು ಕೇಂದ್ರ ಸರ್ಕಾರ ಮಾಡಿತ್ತು. ಇದು ದೇಶದ ಬ್ಯಾಂಕಿಂಗ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಲೀನ ಪ್ರಕ್ರಿಯೆಯಾಗಿತ್ತು.