ಎಂಎಲ್‌ಸಿ ಸ್ಥಾನಕ್ಕೆ ಯತ್ನಾಳ ರಾಜೀನಾಮೆ

First Published 20, Apr 2018, 10:33 AM IST
Basavanagowda Patil Yatnal Resigns
Highlights

ವಿಧಾನ ಪರಿಷತ್‌ ಸದಸ್ಯ ಬಸನಗೌಡ ಪಾಟೀಲ ಯತ್ನಾಳ್‌ ಅವರು ಬುಧವಾರ ರಾತ್ರಿ ಬೆಂಗಳೂರಿನಲ್ಲಿ ವಿಧಾನ ಪರಿಷತ್‌ ಸಭಾಪತಿ .ಎಚ್‌.ಶಂಕರಮೂರ್ತಿ ಅವರನ್ನು ಭೇಟಿಯಾಗಿ ತಮ್ಮ ಮೇಲ್ಮನೆ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ವಿಜಯಪುರ: ವಿಧಾನ ಪರಿಷತ್‌ ಸದಸ್ಯ ಬಸನಗೌಡ ಪಾಟೀಲ ಯತ್ನಾಳ್‌ ಅವರು ಬುಧವಾರ ರಾತ್ರಿ ಬೆಂಗಳೂರಿನಲ್ಲಿ ವಿಧಾನ ಪರಿಷತ್‌ ಸಭಾಪತಿ .ಎಚ್‌.ಶಂಕರಮೂರ್ತಿ ಅವರನ್ನು ಭೇಟಿಯಾಗಿ ತಮ್ಮ ಮೇಲ್ಮನೆ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಯತ್ನಾಳ್‌ ಅವರು ಈಗ ಬಿಜೆಪಿ ಸೇರಿದ್ದಾರೆ. ಬಿಜೆಪಿ ವಿಜಯಪುರ ನಗರದಿಂದ ಅವರನ್ನು ಅಭ್ಯರ್ಥಿಯನ್ನಾಗಿಯೂ ಘೋಷಿಸಿತ್ತು. ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡದೆ ‘ಬಿ’ ಫಾರಂ ಪಡೆದರೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಯತ್ನಾಳ್‌ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇತ್ತು.

ಇದರಿಂದಾಗಿ ಬಿಜೆಪಿ ಹೈಕಮಾಂಡ್‌ ಯತ್ನಾಳ್‌ ಅವರನ್ನು ಬೆಂಗಳೂರಿಗೆ ಬುಧವಾರ ತುರ್ತಾಗಿ ಕರೆಸಿಕೊಂಡು ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿತ್ತು. ಹೀಗಾಗಿ, ಅವರು ರಾಜಿನಾಮೆ ಸಲ್ಲಿಸಿದ್ದಾರೆ. ಯತ್ನಾಳ್‌ ಅವರಿಗೆ ಗುರುವಾರ ಬಿಜೆಪಿಯಿಂದ ‘ಬಿ’ ಫಾರಂ ನೀಡಲಾಗಿದ್ದು, ಅವರು ಶುಕ್ರವಾರ ಬೆಳಗ್ಗೆ ವಿಜಯಪುರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

loader