ಚಿಕ್ಕಬಳ್ಳಾಪುರ :  ನಂದಿಬೆಟ್ಟದ ಅಭಿವೃದ್ಧಿಗೆ ಸಮಗ್ರ ನೀಲಿ ನಕ್ಷೆ ತಯಾರಿಸಿ, ಇಸ್ಫೋಸಿಸ್‌ ಫೌಂಡೇಷನ್‌ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ತಿಳಿಸಿದ್ದಾರೆ.

 ತಾಲೂಕಿನ ನಂದಿಬೆಟ್ಟದಲ್ಲಿ ಇಸ್ಫೋಸಿಸ್‌ ಪ್ರತಿಷ್ಠಾನದಿಂದ ಸಾಮಾಜಿಕ ಹೊಣೆಗಾರಿಕೆ(ಸಿಎಸ್‌ಆರ್‌) ಕಾರ್ಯಕ್ರಮದಡಿ ಸುಮಾರು .75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾದ ಕಾಲುದಾರಿ ರಸ್ತೆಗೆ ಚಾಲನೆ ನೀಡಿ ಮಾತನಾಡಿದರು.

ಕಳೆದ ಬಾರಿ ಜಿಲ್ಲೆಗೆ ಬಂದಾಗ ನಂದಿಬೆಟ್ಟಕ್ಕೆ ಹತ್ತುವ ಪ್ರವಾಸಿಗರಿಗೆ ಬ್ಯಾಟರಿ ಚಾಲಿತ ವಾಹನ ನೀಡುವುದಾಗಿ ಭರವಸೆ ನೀಡಿದ್ದು, ಮಂಗಳವಾರ 3 ಬ್ಯಾಟರಿ ಚಾಲಿತ ವಾಹನಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟುವಾಹನಗಳನ್ನು ನೀಡಲಾಗುವುದು. ಅಲ್ಲದೆ ಬೆಟ್ಟದಲ್ಲಿ ಮೂಲ ಸೌಲಭ್ಯಗಳ ಕೊರತೆ ಇದ್ದು, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಕಲ್ಪಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇಸ್ಫೋಸಿಸ್‌ ಫೌಂಡೇಷನ್‌ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿ ಇದ್ದರು.