2015ರ ಅಕ್ಟೋಬರ್ 20ರ ಅಧಿಸೂಚನೆಯಂತೆ 18ನೇ ಅವಧಿಯ ಮೇಯರ್, ಉಪ ಮೇಯರ್ ಮೀಸಲಾತಿಯನ್ನು ಪ್ರಕಟಿಸಲಾಗಿದ್ದು, ಈ ಮೀಸಲಾತಿ ಪ್ರಕಾರ ಚುನಾವಣೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿ ಆಯುಕ್ತರು ಮತ್ತು ಪ್ರಾದೇಶಿಕ ಆಯುಕ್ತರ ಕಚೇರಿಗೆ ಪತ್ರ ಬರೆದು ತಿಳಿಸಿದ್ದಾರೆ
ಬೆಂಗಳೂರು(ಸೆ.09): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 18ನೇ ಅವಧಿಯ ಮಹಾಪೌರರು ಮತ್ತು ಉಪಮಹಾಪೌರರ ಸ್ಥಾನಗಳಿಗೆ ನಗರಾಭಿವೃದ್ಧಿ ಇಲಾಖೆ ಮೀಸಲಾತಿ ಪ್ರಕಟಿಸಿದೆ. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ, ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲಾತಿ ನಿಗದಿ ಮಾಡಲಾಗಿದೆ. 2015ರ ಅಕ್ಟೋಬರ್ 20ರ ಅಧಿಸೂಚನೆಯಂತೆ 18ನೇ ಅವಧಿಯ ಮೇಯರ್, ಉಪ ಮೇಯರ್ ಮೀಸಲಾತಿಯನ್ನು ಪ್ರಕಟಿಸಲಾಗಿದ್ದು, ಈ ಮೀಸಲಾತಿ ಪ್ರಕಾರ ಚುನಾವಣೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿ ಆಯುಕ್ತರು ಮತ್ತು ಪ್ರಾದೇಶಿಕ ಆಯುಕ್ತರ ಕಚೇರಿಗೆ ಪತ್ರ ಬರೆದು ತಿಳಿಸಿದ್ದಾರೆ
