ಬೆಂಗಳೂರು(ಸೆ. 28): ನಗರದಲ್ಲಿ ಕಸದ ಸಮಸ್ಯೆ ಇನ್ನೂ ಸಂಪೂರ್ಣವಾಗಿ ಬಗೆಹರಿದಿಲ್ಲ. ತನ್ನ ಅವಧಿಯಲ್ಲಿ ಈ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಿಸುವುದು ಪ್ರಮುಖ ಗುರಿ ಎಂದು ಬಿಬಿಎಂಪಿ ಉಪಮೇಯರ್ ಸ್ಪರ್ಧಾಳು ಜೆಡಿಎಸ್'ನ ಆನಂದ್ ಹೇಳಿದ್ದಾರೆ. ಸುವರ್ಣನ್ಯೂಸ್ ವರದಿಗಾರ ಮುತ್ತಪ್ಪ ಲಮಾಣಿ ಜೊತೆ ಮಾತನಾಡಿದ ಆನಂದ್, ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ತನಗೆ ಅಸಮಾಧಾನವಿರುವುದನ್ನು ಒಪ್ಪಿಕೊಂಡಿದ್ದಾರೆ. ಪಕ್ಷದ ವರಿಷ್ಠರ ಜೊತೆ ಕೂತು ಈ ವಿಚಾರದಲ್ಲಿ ಸಮಾಲೋಚನೆ ನಡೆಸಿ ಮುಂದಿನ ನಡೆ ಇಡುವುದಾಗಿ ಜೆಡಿಎಸ್ ಕಾರ್ಪೊರೇಟರ್ ಹೇಳಿದ್ದಾರೆ.
ನಗರದ ಸಮಸ್ಯೆಗಳನ್ನು ನೀಗಿಸುವುದು ತನ್ನ ಗುರಿ: ಉಪಮೇಯರ್ ಅಭ್ಯರ್ಥಿ ಆನಂದ್ ಹೇಳಿಕೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
